ಹೊಸಪೇಟೆ: ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರ ನೆರವಿಗೆ ಸರ್ಕಾರಗಳು ಬರಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕಕರ ಸಂಘದ ನೇತೃತ್ವದಲ್ಲಿ ನಗರದ ಉಪವಿಭಾಗ ಮಟ್ಟದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಮುಂಭಾಗದ ಪ್ರತಿಭಟನೆ ನಡೆಸಲಾಯಿತು.
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಗುತ್ತಿಗೆ- ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ - ಸಮಾನ ಕೆಲಸಕ್ಕೆ ಸಮಾನ ವೇತನ
ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕಕರ ಸಂಘದ ನೇತೃತ್ವದಲ್ಲಿ ಹೊಸಪೇಟೆಯಲ್ಲಿ ಪ್ರತಿಭಟನೆ ನಡೆಸಲಾಯಿತು.
Protest
ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ಕ್ಷೇಮಾಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಬೇಕು. ಗುತ್ತಿಗೆದಾರರನ್ನು ಖಾಯಂಗೊಳಿಸಿ, ಸೇವಾ ಭದ್ರತೆಯನ್ನು ಒದಗಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಆಗ್ರಹಿಸಿದರು.
ಜೊತೆಗೆ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕಕರಿಗೆ ಇಲಾಖೆಯಿಂದ ನೇರವಾಗಿ ವೇತನ ಪಾವತಿ ಮಾಡಬೇಕು, ಎನ್ ಎಚ್ ಎಂ ಅಡಿ ಕೆಲಸ ಮಾಡುವವರಿಗೆ ಕೇಂದ್ರ ಸರ್ಕಾರ ಬೋನಸ್ ನೀಡಬೇಕು. ಅಲ್ಲದೇ, ಆರೋಗ್ಯ ಭಾಗ್ಯ ಯೋಜನೆಯನ್ನು ಎಲ್ಲ ನೌಕಕರಿಗೆ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.
TAGGED:
ಹೊರಗುತ್ತಿಗೆ ನೌಕಕರ ಸಂಘ