ಕರ್ನಾಟಕ

karnataka

ETV Bharat / state

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ: ನೂರಾರು ವಿದ್ಯಾರ್ಥಿಗಳಿಂದ ಪ್ರತಿಭಟನೆ - bellary protest latest news

ಹೈದರಾಬಾದ್​​ನಲ್ಲಿ ಪಶುವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಪಾಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಲಾಯ್ತು.

protest
ವಿದ್ಯಾರ್ಥಿಗಳಿಂದ ಪ್ರತಿಭಟನೆ

By

Published : Dec 2, 2019, 7:54 PM IST

ಬಳ್ಳಾರಿ:ಹೈದರಾಬಾದ್​​ನಲ್ಲಿ ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ ಆರೋಪಿಗಳನ್ನು ಗಲ್ಲಿಗೇರಿಸಿಬೇಕೆಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್) ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ರು.

ನಗರದ ರಾಯಲ್ ವೃತ್ತದಲ್ಲಿ ಪ್ರತಿಭಟನೆ ಮಾಡಿ ನಂತರ ಮೀನಾಕ್ಷಿ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಯವರೆಗೆ ನೂರಾರು ಶಾಲಾ-ಕಾಲೇಜು ವಿದ್ಯಾರ್ಥಿಗಳು, ಅತ್ಯಾಚಾರಿಗಳು ಮತ್ತು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡಿದರು. ಸಮಾಜದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣಗಳು ಇಲ್ಲಿಯ ಕಾನೂನು, ಸರ್ಕಾರದ ನಿರ್ಲಕ್ಷ್ಯದಿಂದ ಹೆಚ್ಚಾಗಿವೆ ಎಂದು ಮಹಿಳಾ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಎ.ಶಾಂತ ದೂರಿದರು.

ವಿದ್ಯಾರ್ಥಿಗಳಿಂದ ಪ್ರತಿಭಟನೆ

ನಿರ್ಭಯಾ ಪ್ರಕರಣದ ನಂತರ ರಚನೆಯಾದ ವರ್ಮ ಸಮಿತಿ ಶಿಫಾರಸುಗಳನ್ನು ಜಾರಿ ಮಾಡಿದ್ರೆ ಮಾತ್ರ ಈ ರೀತಿ ಅತ್ಯಾಚಾರ, ಕೊಲೆ ಮಾಡುವವರಿಗೆ ಸರಿಯಾದ ಪಾಠ ಕಲಿಸಿದಂತೆ ಆಗುತ್ತದೆ ಎಂದರು.‌

For All Latest Updates

ABOUT THE AUTHOR

...view details