ಹೊಸಪೇಟೆ: ಹಥ್ರಾಸ್ ಯುವತಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸುಪ್ರೀಂಕೋರ್ಟ್ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಸಿಐಟಿಯು ಸೇರಿ ನಾನಾ ಸಂಘಟನೆಗಳು ನಗರದ ತಹಶೀಲ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದವು.
ಹಥ್ರಾಸ್ ಅತ್ಯಾಚಾರ ಪ್ರಕರಣ: ಸುಪ್ರೀಂಕೋರ್ಟ್ ನಿಗಾದಲ್ಲಿ ತನಿಖೆಗೆ ಒಪ್ಪಿಸಲು ಆಗ್ರಹ
ಹಥ್ರಾಸ್ ಯುವತಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸುಪ್ರೀಂಕೋರ್ಟ್ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿ ನಗರದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ.
ಹಥ್ರಾಸ್ ಯುವತಿಯ ಪ್ರಕರಣವನ್ನು ಸುಪ್ರೀಂಕೋರ್ಟ್ ಒಪ್ಪಿಸಲು ಆಗ್ರಹ
ಯುವತಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಆದರೆ, ಪ್ರಕರಣವನ್ನು ಯೋಗಿ ಆದಿತ್ಯನಾಥ ಸರ್ಕಾರ ಮುಚ್ಚಿಹಾಕಲು ಪ್ರಯತ್ನ ನಡೆಸಿದೆ. ಹಾಗಾಗಿ ಸತ್ಯಾಂಶ ಹೊರಬರಲು ಸುಪ್ರೀಂಕೋರ್ಟ್ಗೆ ತನಿಖೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.
ಕರ್ತವ್ಯ ಮರೆತ ಪೊಲೀಸ್ ಅಧಿಕಾರಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಯುವತಿ ಕುಟುಂಬಕ್ಕೆ ರಕ್ಷಣೆ ನೀಡಬೇಕು. ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಮಹಿಳಾ ದೌರ್ಜನ್ಯ ವಿರೋಧಿ ಕಾಯ್ದೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕು ಎಂದು ಒತ್ತಾಯಿಸಿದರು. ಬಳಿಕ ತಹಶೀಲ್ದಾರ್ ಎಚ್.ವಿಶ್ವನಾಥ ಅವರಿಗೆ ಮನವಿ ಸಲ್ಲಿಸಿದರು.