ಬಳ್ಳಾರಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬಳ್ಳಾರಿಯಲ್ಲಿ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.
ಸಿಎಎ ವಿರುದ್ಧ ಬಳ್ಳಾರಿಯಲ್ಲಿ ಮುಂದುವರೆದ ಪ್ರತಿಭಟನೆ - protest in Bellary
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬಳ್ಳಾರಿಯಲ್ಲಿ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.
ಸಿಎಎ ವಿರುದ್ಧ ಬಳ್ಳಾರಿಯಲ್ಲಿ ಪ್ರತಿಭಟನೆ
ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ (ಡಿ.ಜಿ.ಸಾಗರ ಬಣ) ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದ್ರು. ಸಿಎಎ, ಎನ್ಆರ್ಸಿ ಹಾಗೂ ಎನ್ಪಿಆರ್ ಕಾಯ್ದೆಗಳನ್ನು ಜಾರಿಗೊಳಿಸುವುದರಿಂದ ದೇಶದಲ್ಲಿ ಶಾಂತಿ ಕದಡುವ ಸಾಧ್ಯತೆ ಇದೆ ಎಂದು ಡಿಎಸ್ಎಸ್ ಸಂಘಟನೆ ದೂರಿದೆ.
ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಎ.ಮಾನಯ್ಯ, ಮುಖಂಡರಾದ ಹುಮಾಯೂನ್ ನಾಸೀರ್ ಖಾನ್ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.