ಬಳ್ಳಾರಿ: ವಿಜಯನಗರ ಪ್ರತ್ಯೇಕ ಜಿಲ್ಲೆಗೆ ವಿರೋಧ ವ್ಯಕ್ತಪಡಿಸಿ ಜಿಲ್ಲೆಯ ನಾನಾ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ವಿಜಯನಗರ ಪ್ರತ್ಯೇಕ ಜಿಲ್ಲೆಗೆ ವಿರೋಧ.. ವಿವಿಧ ಸಂಘಟನೆಗಳಿಂದ ಪ್ರತಿಭಟನೆ - Bellary news update
ವಿಜಯನಗರ ಪ್ರತ್ಯೇಕ ಜಿಲ್ಲೆಗೆ ವಿರೋಧ ವ್ಯಕ್ತಪಡಿಸಿ ಜಿಲ್ಲೆಯ ನಾನಾ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ನಗರದ ರಾಯಲ್ ವೃತ್ತದಲ್ಲಿ ಕನ್ನಡಪರ ಸಂಘಟನೆ, ವಕೀಲರ ಸಂಘ, ರೈತ ಸಂಘ, ಸಾಮಾಜಿಕ ಕಾರ್ಯಕರ್ತರು ಸೇರಿ ನೂರಾರು ಜನ ರಸ್ತೆ ಉದ್ದಕ್ಕೂ ಪ್ರತಿಭಟನೆ ಮಾಡಿದರು. ಬಳಿಕ ಜಿಲ್ಲಾಧಿಕಾರಿ ಎಸ್ ಎಸ್ ನಕುಲ್ ಅವರಿಗೆ ಮನವಿಪತ್ರ ಸಲ್ಲಿಸಿದರು.ಪ್ರತಿಭಟನೆಯಲ್ಲಿ ಪುರುಷೋತ್ತಮ ಗೌಡ, ಮೋಹನ್, ಕುಡುತಿನಿ ಶ್ರೀನಿವಾಸ್, ಮಧುಸೂದನ್, ತೇಜು, ಈಶ್ವರ ರೆಡ್ಡಿ, ಪಾಟೀಲ್ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.