ಕರ್ನಾಟಕ

karnataka

ETV Bharat / state

ತಹಶೀಲ್ದಾರ್​ ಹತ್ಯೆ ಖಂಡಿಸಿ ಬಳ್ಳಾರಿಯಲ್ಲಿ ಪ್ರತಿಭಟನೆ... ಕಠಿಣ ಕ್ರಮಕ್ಕೆ ಆಗ್ರಹ - Ballary district news

ತಹಶೀಲ್ದಾರ್ ಹತ್ಯೆ ಖಂಡಿಸಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು.

Protest in Bellary condemning Tahsildar assassination
ತಹಶೀಲ್ದಾರ್​ ಹತ್ಯೆ ಖಂಡಿಸಿ ಪ್ರತಿಭಟನೆ

By

Published : Jul 10, 2020, 7:56 PM IST

ಬಳ್ಳಾರಿ: ಕೋಲಾರದ ಬಂಗಾರಪೇಟೆ ತಾಲೂಕಿನಲ್ಲಿ ಜಮೀನು ಸಮೀಕ್ಷೆಗೆ ಬಂದಿದ್ದ ತಹಶೀಲ್ದಾರ್​​​ ಬಿ.ಕೆ. ಚಂದ್ರಮೌಳೇಶ್ವರ ಅವರ ಹತ್ಯೆ ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ತಹಶೀಲ್ದಾರ್​ ಹತ್ಯೆ ಖಂಡಿಸಿ ಪ್ರತಿಭಟನೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ. ಶಿವಾಜಿರಾವ್ ಮಾತನಾಡಿ, ಬಂಗಾರಪೇಟೆಯ ತೊಪ್ಪನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಾಮಮೂರ್ತಿ ಹಾಗೂ ವೆಂಕಟಾಚಲಪತಿ ಎಂಬವರ ಜಮೀನಿನ ವ್ಯಾಜ್ಯದ ಸಂಬಂಧ ಸಮೀಕ್ಷೆ ನಡೆಸುತ್ತಿದ್ದಾಗ ಆರೋಪಿ ವೆಂಕಟಾಚಲಪತಿ ಚಾಕುವಿನಿಂದ ಇರಿದು ಹತ್ಯೆಗೈದು ಪರಾರಿಯಾಗಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಎರಡು ನಿಮಿಷಗಳು ಮೌನಾಚರಣೆ ಮಾಡಿ ಮೃತ ತಹಶೀಲ್ದಾರರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಬೇಡಿಕೆಗಳು

  • ಅಪರಾಧಿಯನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸುವುದು
  • ಸರ್ಕಾರಿ ನೌಕರರು ನಿರ್ಭಿತಿಯಿಂದ ಕಾರ್ಯನಿರ್ವಹಿಸಲು ರಕ್ಷಣಾ ಕ್ರಮಗಳನ್ನು ಕೈಗೊಳ್ಳಬೇಕು
  • ಮೃತ ಕುಟುಂಬಕ್ಕೆ ಗರಿಷ್ಠ ಮಟ್ಟದ ಪರಿಹಾರ ಘೋಷಿಸಬೇಕು
  • ಎಲ್ಲಾ ಆರ್ಥಿಕ ಸೌಲಭ್ಯಗಳನ್ನು ಶೀಘ್ರವಾಗಿ ಬಿಡುಗಡೆ ಮಾಡಬೇಕು

ABOUT THE AUTHOR

...view details