ಬಳ್ಳಾರಿ: ಉತ್ತರಪ್ರದೇಶದ ಹಥ್ರಾಸ್ನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಮರಣ ದಂಡನೆ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಲಕ್ಷ್ಮಿನಾರಾಯಣ ನಾಗವಾರ ಬಣ ಹಾಗೂ ಮತ್ತಿತರ ಸಂಘಟನೆಗಳ ಸದಸ್ಯರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಹಥ್ರಾಸ್ ಅತ್ಯಾಚಾರ ಪ್ರಕರಣ ಖಂಡಿಸಿ ಬಳ್ಳಾರಿಯಲ್ಲಿ ಡಿಎಸ್ಎಸ್ ಪ್ರತಿಭಟನೆ
ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಮರಣ ದಂಡನೆ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ಸದಸ್ಯರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಹಥ್ರಾಸ್ ಅತ್ಯಾಚಾರ ಪ್ರಕರಣ ಖಂಡಿಸಿ ಬಳ್ಳಾರಿಯಲ್ಲಿ ಡಿಎಸ್ಎಸ್ ಪ್ರತಿಭಟನೆ
ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಇಂತಹ ಘಟನೆ ನಡೆದರೆ ಆಯಾ ರಾಜ್ಯದ ಮುಖ್ಯಮಂತ್ರಿ ಮತ್ತು ಗೃಹ ಸಚಿವರನ್ನು ಹೊಣೆಗಾರರನ್ನಾಗಿ ಮಾಡಬೇಕು. ಜಾತಿ ನಿಂದನೆ ಮತ್ತು ದೌರ್ಜನ್ಯಗಳ ಮೇಲಿನ ಕಾನೂನಿನ ಕ್ರಮ ಬಿಗಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಈ ವೇಳೆ ಜಿಲ್ಲಾಡಳಿತದ ಮೂಲಕ ಕಠಿಣ ಕ್ರಮಕ್ಕೆ ಆಗ್ರಹಿಸಿ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು.