ಬಳ್ಳಾರಿ: ರಾಹುಲ್ ಗಾಂಧಿ ಮೇಲೆ ಉತ್ತರ ಪ್ರದೇಶದ ಪೊಲೀಸರ ದರ್ಪ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ರಾಹುಲ್ ಗಾಂಧಿ ವಿರುದ್ಧ ಯುಪಿ ಪೊಲೀಸರ ನಡೆ ಖಂಡಿಸಿ ಪ್ರತಿಭಟನೆ - ಬಳ್ಳಾರಿ ಇತ್ತೀಚಿನ ಸುದ್ದಿ
ರಾಹುಲ್ ಗಾಂಧಿ ಮೇಲೆ ಉತ್ತರ ಪ್ರದೇಶದ ಪೊಲೀಸರು ನಡೆಸಿರು ದರ್ಪದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ
ಈ ವೇಳೆ ಜಿಲ್ಲೆಯ ರಾಯಲ್ ವೃತ್ತದಲ್ಲಿ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಯೋಗಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಉತ್ತರ ಪ್ರದೇಶದಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.