ಕರ್ನಾಟಕ

karnataka

ETV Bharat / state

ಬಳ್ಳಾರಿ ಜಿಲ್ಲೆ ವಿಭಜನೆಯ ಖಂಡಿಸಿ ಪ್ರತಿಭಟನೆ: ಭಾವಸಾರ ಕ್ಷತ್ರಿಯ ಸಮಾಜದ ಬೆಂಬಲ - Bellary

ಬಳ್ಳಾರಿ ಜಿಲ್ಲೆ ವಿಭಜನೆ ಖಂಡಿಸಿ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯು ಕೈಗೊಂಡಿದ್ದ ಅನಿರ್ದಿಷ್ಟಾವಧಿ ಧರಣಿಗೆ ಭಾವಸಾರ ಕ್ಷತ್ರಿಯ ಯುವಕ ಸಮಾಜದ ಮುಖಂಡರು ಬೆಂಬಲ ಸೂಚಿಸಿದ್ದಾರೆ.

Protest in Bellary
ಬಳ್ಳಾರಿ ಜಿಲ್ಲೆ ವಿಭಜನೆಯ ಖಂಡಿಸಿ ಪ್ರತಿಭಟನೆ: ಭಾವಸಾರ ಕ್ಷತ್ರಿಯ ಸಮಾಜದ ಬೆಂಬಲ

By

Published : Dec 20, 2020, 4:15 PM IST

ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆಯನ್ನು ಖಂಡಿಸಿ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯು ಕೈಗೊಂಡಿದ್ದ ಅನಿರ್ದಿಷ್ಟಾವಧಿ ಧರಣಿ 7ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನೆಗೆ ಇಂದು ಭಾವಸಾರ ಕ್ಷತ್ರಿಯ ಯುವಕ ಸಮಾಜದ ಮುಖಂಡರು ಬೆಂಬಲ ಸೂಚಿಸಿದ್ದಾರೆ.

ಭಾವಸಾರ ಕ್ಷತ್ರಿಯ ಸಮಾಜದ ಬೆಂಬಲ

ನಗರದ ಡಿಸಿ ಕಚೇರಿಯ ಎದುರು ಸ್ಥಾಪಿಸಲಾದ ತಾತ್ಕಾಲಿಕ ಟೆಂಟ್​ನಲ್ಲಿ ನಾನಾ ಸಂಘಟನೆಗಳ ಮುಖಂಡರೊಂದಿಗೆ ಭಾವಸಾರ ಕ್ಷತ್ರಿಯ ಯುವಕ ಸಮಾಜದ ಪದಾಧಿಕಾರಿಗಳು ಪಾಲ್ಗೊಂಡು ಕೆಲಕಾಲ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ರು.

ಅಖಂಡ ಬಳ್ಳಾರಿ ಜಿಲ್ಲೆಯನ್ನ ವಿಭಜನೆ ಮಾಡೋದು ತರವಲ್ಲ. ಭಾಷಾವಾರು ವಿಂಗಡಣೆ ವೇಳೆಯಲ್ಲಿ ಬಳ್ಳಾರಿ ಜಿಲ್ಲೆಯನ್ನ ಅಖಂಡವಾಗಿಯೇ ಉಳಿಸಲಾಗಿತ್ತು. ಹೀಗಾಗಿ, ರಾಜ್ಯ ಸರ್ಕಾರ ಈ ಜಿಲ್ಲೆಯ ವಿಭಜನೆ ಮಾಡಬಾರದು. ಈ ಕೂಡಲೇ ನೂತನ ವಿಜಯನಗರ ಜಿಲ್ಲೆ ರಚನೆಯನ್ನ ಕೈ ಬಿಡಬೇಕು ಎಂದು ಧರಣಿ ನಿರತರು ಆಗ್ರಹಿಸಿದ್ದಾರೆ.

ABOUT THE AUTHOR

...view details