ಹೊಸಪೇಟೆ (ಬಳ್ಳಾರಿ):ರಾಜ್ಯಸಭೆಯ ಡಾ.ಸೈಯ್ಯದ್ ನಾಸೀರ್ ಹುಸೇನ್ ಸೇರಿದಂತೆ 8 ಸದಸ್ಯರನ್ನು ಅಮಾನತು ಮಾಡಿದ ಆದೇಶವನ್ನು ತಕ್ಷಣವೇ ರದ್ದುಪಡಿಸುವಂತೆ ಆಗ್ರಹಿಸಿ ಬ್ಲಾಕ್ ಕಾಂಗ್ರೆಸ್ನಿಂದ ನಗರದ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರೈತ ವಿರೋಧಿ ಕೃಷಿ ಮಸೂದೆಗಳನ್ನು ಅಂಗೀಕರಿಸದಂತೆ ಹಾಗೂ ರಾಜ್ಯಸಭೆಯಲ್ಲಿ ಈ ಮಸೂದೆಗಳನ್ನು ವಿರೋಧಿಸಿ ಕಾಂಗ್ರೆಸ್ ರಾಜ್ಯಸಭಾ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಸ್ಪೀಕರ್ 8 ಸದಸ್ಯರನ್ನು ಎಂಟು ದಿನಗಳ ಕಾಲ ಅಮಾನತು ಮಾಡಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ. ಕೂಡಲೇ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.