ಕರ್ನಾಟಕ

karnataka

ETV Bharat / state

ಶಾಸಕ ಭೀಮಾನಾಯ್ಕರಿಂದ ಹಲ್ಲೆ ಖಂಡಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಹೊಸಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಗರಿಬೊಮ್ಮನಹಳ್ಳಿ ಕಾಂಗ್ರೆಸ್ ಶಾಸಕ ಭೀಮಾನಾಯ್ಕ ಮಾಡಿರುವ ಹಲ್ಲೆ‌ಯನ್ನು ಖಂಡಿಸಿ ಹೊಸಪೇಟೆ ಮಂಡಲದ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಯಿತು.

hospet
ಹಲ್ಲೆ ಖಂಡಿಸಿ ಪ್ರತಿಭಟನೆ

By

Published : Nov 9, 2020, 6:04 PM IST

ಹೊಸಪೇಟೆ: ಹೊಸಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಗರಿಬೊಮ್ಮನಹಳ್ಳಿ ಕಾಂಗ್ರೆಸ್ ಶಾಸಕ ಭೀಮಾನಾಯ್ಕ ಮಾಡಿರುವ ಹಲ್ಲೆ‌ಯನ್ನು ಖಂಡಿಸಿ ಹೊಸಪೇಟೆ ಮಂಡಲದ ಬಿಜೆಪಿ ಕಾರ್ಯಕರ್ತರಿಂದ ನಗರದ ರೋಟರಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆ‌ಯನ್ನು ಖಂಡಿಸಿ ಹೊಸಪೇಟೆ ಮಂಡಲದ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಯಿತು.

ಶಾಸಕ ಭೀಮಾನಾಯ್ಕ ಗೂಂಡಾ ವರ್ತನೆಯನ್ನು ತೋರುತ್ತಿದ್ದಾರೆ.‌ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದರೆ ಸುಮ್ಮನೆ ಇರಲ್ಲ. ಕೂಡಲೇ ಕಾನೂನು ಅಡಿಯಲ್ಲಿ ಭೀಮಾನಾಯ್ಕ ಅವರನ್ನು ಬಂಧಿಸಿ, ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್​ಗೆ ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಹಾಗಾಗಿ ಈ ರೀತಿಯಾಗಿ ಶಾಸಕರು ಗೂಂಡಾ ವರ್ತನೆ ಮಾಡುತ್ತಿದ್ದಾರೆ. ಜನರಿಂದ ಮತಗಳನ್ನು ಗಳಿಸಿ ಜಯಗೊಂಡಿದ್ದಾರೆ. ಸಂವಿಧಾನ ಬದ್ಧವಾಗಿ ನಡೆದುಕೊಳ್ಳಬೇಕು. ಕಾಂಗ್ರೆಸ್ ಪಕ್ಷದಿಂದ ಭೀಮಾನಾಯ್ಕ ಅವರನ್ನು ಉಚ್ಛಾಟನೆ ಮಾಡಬೇಕು ಹಾಗೂ ಸ್ಪೀಕರ್ ಅವರು ಭೀಮಾನಾಯ್ಕರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು. ಬಳಿಕ ತಹಶೀಲ್ದಾರ್ ಕಚೇರಿಯ ಶಿರಸ್ತೇದಾರ್ ಶ್ರೀಧರ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.

ABOUT THE AUTHOR

...view details