ಬಳ್ಳಾರಿ: ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರ ಮೇಲಿನ ನ್ಯಾಯಂಗ ನಿಂದನೆ ವಿರೋಧಿಸಿ ನಗರದ ಜಿಲ್ಲಾ ಕೋರ್ಟ್ ಆವರಣದ ಮುಂಭಾಗದಲ್ಲಿ ಇಂದು ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ಬಳ್ಳಾರಿ: ಪ್ರಶಾಂತ್ ಭೂಷಣ್ ಮೇಲಿನ ನ್ಯಾಯಂಗ ನಿಂದನೆ ವಿರೋಧಿಸಿ ಪ್ರತಿಭಟನೆ - ballary protest
ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರ ಮೇಲಿನ ನ್ಯಾಯಂಗ ನಿಂದನೆ ವಿರೋಧಿಸಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ಈ ಸಮಯದಲ್ಲಿ ಮಾತನಾಡಿದ ಎ.ಐ.ಯು.ಟಿ.ಯಿ.ಸಿ ರಾಜ್ಯಾಧ್ಯಕ್ಷ ಕೆ.ಸೋಮಶೇಖರ್, ಈ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಕಾಪಾಡಬೇಕಾಗಿತ್ತು ಹಾಗೇ ಪ್ರಜಾಪ್ರಭುತ್ವದ ಹಕ್ಕುಗಳನ್ನು ಖಾತ್ರಿ ಪಡಿಸಬೇಕಾಗಿತ್ತು. ಆದರೆ ಅದೇ ನ್ಯಾಯಾಲಯ ನಮ್ಮ ಹಕ್ಕುಗಳನ್ನು ಕಸಿದುಕೊಳ್ಳುವ ಕೆಲಸ ಮಾಡುತ್ತಿದೆ ಎಂದು ದೂರಿದರು. ಎಲ್ಲಾ ಅಧಿಕಾರವನ್ನು ಒಬ್ಬರ ಕೈಗೆ ಸೇರಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವ ಹಕ್ಕುಗಳನ್ನು ಧಮನ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದರು.
ಈ ಪ್ರತಿಭಟನೆಯಲ್ಲಿ ರೈತ ಸಂಘಟನೆ, ಎ.ಐ.ಡಿ.ಎಸ್.ಓ, ಎ.ಐ.ಎಮ್.ಎಸ್.ಎಸ್ ಸಂಘಟನೆಯ ಹೋರಾಟಗಾರರು ಭಾಗವಹಿಸಿದ್ದರು.