ಬಳ್ಳಾರಿ:ರೈತರಿಗೆ ಭತ್ತ ಖರೀದಿಯಲ್ಲಿ ಬೆಂಬಲ ಬೆಲೆ ಸಿಗದೇ ಇರುವುದರಿಂದ ವಿಷಸೇವನೆ ಮಾಡುವ ಪರಿಸ್ಥಿತಿ ಬಂದಿದೆ ಎಂದು ಪ್ರೊ. ಎಂಡಿ ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಬಳ್ಳಾರಿ ಜಿಲ್ಲಾ ಘಟಕ ಜಿಲ್ಲಾಧ್ಯಕ್ಷ ಆರ್.ಮಾಧವರೆಡ್ಡಿ ಕರೂರು ದೂರಿದರು.
ಭತ್ತ ಖರೀದಿಯಲ್ಲಿ ಬೆಂಬಲ ಬೆಲೆ ನೀಡುವಂತೆ ಆಗ್ರಹ, ರೈತ ಸಂಘದಿಂದ ಬೃಹತ್ ಪ್ರತಿಭಟನೆ - ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಪ್ರತಿಭಟನೆ
ರೈತರಿಗೆ ಮರಣಶಾಸನವಾಗಿರುವ ಕಾಯ್ದೆಗಳನ್ನು ಹಿಂಪಡೆಯಬೇಕು. ಹಾಗೇ ಎಲ್ಲಾ ಜಿಲ್ಲಾ, ತಾಲೂಕು, ಹೋಬಳಿ ಮಟ್ಟದ ಕೇಂದ್ರದಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಪ್ರತಿಭಟನೆ ನಡೆಸಿತು.
ನಗರದ ಕಾಗೆ ಪಾರ್ಕ್ ನಿಂದ ರಾಯಲ್ ವೃತ್ತದ ಮೂಲಕ, ಜಿಲ್ಲಾಧಿಕಾರಿಯ ಕಚೇರಿಯವರೆಗೆ ರೈತ ನಾಯಕ ಪ್ರೊ. ಎಂಡಿ ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರೈತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಈ ಸಮಯದಲ್ಲಿ ಈಟಿವಿ ಭಾರತದೊಂದಿಗೆ ರೈತ ಸಂಘ ಹಾಗೂ ಹಸಿರುಸೇನೆ ಬಳ್ಳಾರಿ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಆರ್. ಮಾಧವರೆಡ್ಡಿ ಕರೂರು ಮಾತನಾಡಿದರು. ಭತ್ತ ಖರೀದಿಗೆ ಸರ್ಕಾರ 1888 ರೂಪಾಯಿ ಬೆಂಬಲ ಬೆಲೆ ನಿಗದಿ ಮಾಡಿದೆ. ಆದರೆ ಇದುವರೆಗೂ ಭತ್ತ ಖರೀದಿ ಕೇಂದ್ರವನ್ನು ತೆರೆದಿಲ್ಲ ಎಂದು ದೂರಿದರು.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನವೆಂಬರ್ 1 ರಿಂದಲ್ಲೆ ಅರ್ಜಿಗಳನ್ನು ತೆಗೆದುಕೊಳ್ಳುತ್ತೇವೆ ಮತ್ತು ಭತ್ತ ಖರೀದಿ ಕೇಂದ್ರವನ್ನು ಆರಂಭ ಮಾಡುತ್ತೇವೆ ಎಂದು ಹೇಳಿದರು. ಆದರೆ ಇದುವರೆಗೂ ಭತ್ತ ಖರೀದಿ ಕೇಂದ್ರ ತೆರೆದಿಲ್ಲ. ಜಿಲ್ಲೆಯಲ್ಲಿ ಇದುವರೆಗೂ 25 ರಷ್ಟು ಭತ್ತ ಕಟಾವ್ ಆಗಿದೆ ಇನ್ನು 75 ರಷ್ಟು ಆಗಬೇಕಿದೆ ಎಂದರು.