ಬಳ್ಳಾರಿ:ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಕೊರನಾ ವೈರಸ್ ಹರಡುವ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಐಎಂಎ ಮಹಿಳಾ ಘಟಕದ ವೈದ್ಯರಾದ ಡಾ.ಅರುಣ ಮತ್ತು ಡಾ.ಭಾವನಾ ಅವರು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಬಳ್ಳಾರಿಯಲ್ಲಿ ಕೋವಿಡ್-19 ಕುರಿತು ಸಾರ್ವಜನಿಕರಲ್ಲಿ ಅರಿವು...
ಕೊರೊನಾ ಹರಡುವ ಭೀತಿ ಹಿನ್ನೆಲೆಯಲ್ಲಿ ಐಎಂಎ ಮಹಿಳಾ ಘಟಕದ ವೈದ್ಯರಾದ ಡಾ.ಅರುಣ ಮತ್ತು ಡಾ.ಭಾವನಾ ಅವರು ಕೋವಿಡ್-19 ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಕೊವೀಡ್-19 ಕುರಿತು ಸಾರ್ವಜನಿಕರಲ್ಲಿ ಅರಿವು
ಶುಕ್ರವಾರ ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಕೋವಿಡ್-19 ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗಿತ್ತು. ನಂತರ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ್, ಕೊರೊನಾ ಪಾಸಿಟಿವ್ ಪತ್ತೆಯಾದ ಗುಗ್ಗರಹಟ್ಟಿ ಪ್ರದೇಶಕ್ಕೆ ಭೇಟಿ ನೀಡಿ ಸೋಂಕು ಹರಡುವ ಬಗ್ಗೆ, ಸರ್ಕಾರದ ನಿಯಮಗಳನ್ನು ಪಾಲಿಸುವಂತೆ ಮತ್ತು ಸಾಮಾಜಿಕ ಅಂತರ ಪಾಲನೆ ಮತ್ತು ಕಡ್ಡಾಯವಾಗಿ ಮಾಸ್ಕ್ನ್ನು ಧರಿಸುವಂತೆ ಮನವಿ ಮಾಡಿದರು.
ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣನಾಯಕ್, ವಿವಿಧ ಇಲಾಖೆಯ ಅಧಿಕಾರಿಗಳು, ಸ್ವಯಂ ಸೇವಕರಾದ ಕೈಲಾಶ್ ಜೈನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.