ವಿಜಯನಗರ :ಹೊಸಪೇಟೆ ನಗರದಲ್ಲಿ ಪ್ರತಿಷ್ಠಾಪಿಸಲಾಗಿರುವ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಕಂಚಿನ ಪುತ್ಥಳಿಯನ್ನು ರಾಘವೇಂದ್ರ ರಾಜ್ ಕುಮಾರ್ ಅನಾವರಣಗೊಳಿಸಿದರು. ಈ ವೇಳೆ ರಾಘವೇಂದ್ರ ರಾಜ್‌ಕುಮಾರ್ ಹಾಗೂ ಅವರ ಪತ್ನಿ ಮಂಗಳಾ ಅವರು ದುಃಖ ತಡೆಯಲಾಗದೆ ಕಣ್ಣೀರು ಹಾಕಿದರು.
'ಅಪ್ಪು' ಪುತ್ಥಳಿ ಅನಾವರಣ ಸಂಭ್ರಮ ಇದಕ್ಕೂ ಮುನ್ನ ರಾಘವೇಂದ್ರ ರಾಜ್‌ಕುಮಾರ್ ಅವರು ಹೊಸಪೇಟೆಗೆ ಬಂದ ವೇಳೆ ಅಪ್ಪು ಅಭಿಮಾನಿಗಳು ಸ್ವಾಗತಿಸಿದರು. ಈ ವೇಳೆ ಮಾತನಾಡಿದ ಅವರು, ಪುನೀತ್ ರಾಜ್‌ಕುಮಾರ್ ಮೇಲಿರುವ ಪ್ರೀತಿ, ವಿಶ್ವಾಸ, ಅಭಿಮಾನಕ್ಕೆ ನಾನು ಕೃತಜ್ಞತೆ ಸಲ್ಲಿಸುತ್ತಿದ್ದೇನೆ ಎಂದು ಹೇಳಿದರು.
ನಾನೊಬ್ಬ ಅಪ್ಪಟ ಅಪ್ಪು ಅಭಿಮಾನಿಯಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದೇನೆ. ಪುನೀತ್ ರಾಜ್ ಕುಮಾರ್ ಅವರ ಮೇಲೆ ಅಪಾರ ಅಭಿಮಾನ ಇಟ್ಟುಕೊಂಡಿರುವ ಹೊಸಪೇಟೆ ಜನ ಜಿಲ್ಲಾ ಕ್ರೀಡಾಂಗಣಕ್ಕೆ ಹಾಗೂ ನಗರದ ಹೃದಯಭಾಗದಲ್ಲಿರುವ ವೃತ್ತಕ್ಕೆ ಪುನೀತ್ ರಾಜ್‌ಕುಮಾರ್ ವೃತ್ತ ಎಂದು ನಾಮಕರಣ ಮಾಡಿದ್ದಾರೆ.
'ಅಪ್ಪು' ಪುತ್ಥಳಿ ಅನಾವರಣಕ್ಕೆ ರಾಘವೇಂದ್ರ ರಾಜ್‌ಕುಮಾರ್ ಆಗಮನ ಇದೀಗ ಈ ವೃತ್ತದಲ್ಲಿ ಪುನೀತ್ ಅವರ ಏಳು ಅಡಿ ಎತ್ತರದ ಕಂಚಿನ ಪುತ್ಥಳಿ ಪ್ರತಿಷ್ಠಾಪನೆ ಮಾಡಿರುವ ಕಾರ್ಯವನ್ನು ಮುಕ್ತ ಕಂಠದಿಂದ ಶ್ಲಾಘಿಸಿ ಅಭಿಮಾನಿಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಓದಿ:ನಿಮ್ಮ ನಿಮ್ಮ ಚಡ್ಡಿ ಉದುರಿಸಿಕೊಳ್ಳಿ, ರಾಜ್ಯದ ಜನರ ಚಡ್ಡಿ ಉದುರಿಸಲು ಹೋಗಬೇಡಿ ; ಹೆಚ್‌ಡಿಕೆ