ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿಸಿ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯು ಕೈಗೊಂಡಿರುವ ಅನಿರ್ದಿಷ್ಟಾವಧಿ ಧರಣಿ 21ನೇ ದಿನಕ್ಕೆ ಕಾಲಿರಿಸಿದ್ದು, ಆಲ್ ಇಂಡಿಯಾ ರಾಹುಲ್ ಗಾಂಧಿ ಬ್ರಿಗೇಡ್ ಕಾಂಗ್ರೆಸ್ನ ಪದಾಧಿಕಾರಿಗಳು ಈ ದಿನದ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿ ಹೋರಾಟಕ್ಕೆ ರಾಹುಲ್ ಗಾಂಧಿ ಬ್ರಿಗೇಡ್ ಕಾಂಗ್ರೆಸ್ ಬೆಂಬಲ
ಬಳ್ಳಾರಿ ನಗರದ ಡಿಸಿ ಕಚೇರಿ ಎದುರು ಸ್ಥಾಪಿಸಲಾದ ತಾತ್ಕಾಲಿಕ ಟೆಂಟ್ನಲ್ಲಿ ನಾನಾ ಸಂಘಟನೆಗಳ ಮುಖಂಡರೊಂದಿಗೆ ಆಲ್ ಇಂಡಿಯಾ ರಾಹುಲ್ ಗಾಂಧಿ ಬ್ರಿಗೇಡ್ ಮುಖಂಡರು ಭಾಗವಹಿಸಿ ರಾಜ್ಯ ಸರ್ಕಾರದ ವಿರುದ್ಧ ಕೆಲಕಾಲ ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು.
ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿ ಹೋರಾಟ
ಓದಿ: ಅಪ್ಪ ಕ್ಷೇಮವಾಗಿದ್ದಾರೆ, ಆತಂಕ ಬೇಡ: ಡಿವಿಎಸ್ ಪುತ್ರ ಸ್ಪಷ್ಟನೆ
ಅಖಂಡ ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡುವುದು ಸರಿಯಲ್ಲ. ಭಾಷಾವಾರು ವಿಂಗಡಣೆ ವೇಳೆಯಲ್ಲಿ ಬಳ್ಳಾರಿ ಜಿಲ್ಲೆಯನ್ನು ಅಖಂಡವಾಗಿಯೇ ಉಳಿಸಲಾಗಿತ್ತು. ಹೀಗಾಗಿ, ರಾಜ್ಯ ಸರ್ಕಾರ ಕೂಡಲೇ ನೂತನ ವಿಜಯನಗರ ಜಿಲ್ಲೆ ರಚನೆ ಕೈಬಿಡಬೇಕೆಂದು ಮುಖಂಡರು ಸರ್ಕಾರವನ್ನು ಒತ್ತಾಯಿಸಿದರು.