ಬಳ್ಳಾರಿ : ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ 18 ಗ್ರಾಮಗಳಲ್ಲಿ ಅಧಿಕೃತವಾಗಿ ಪ್ರಾಧಿಕಾರದಿಂದ ವಿನ್ಯಾಸ ಅನುಮೋದನೆ ಪಡೆಯದೆ ನೋಂದಣಿ ಮಾಡಲಾಗಿದ್ದು, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಅವರು ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಮನವಿ ಸಲ್ಲಿಸಿದರು.
ಅನಧಿಕೃತವಾಗಿ ವಿನ್ಯಾಸಗಳ ನೋಂದಣಿ: ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ - R ashok news
ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕೆಲವರು ಅಧಿಕೃತವಾಗಿ ಪ್ರಾಧಿಕಾರದಿಂದ ವಿನ್ಯಾಸ ಅನುಮೋದನೆ ಪಡೆಯದೆ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಅರೋಪ ಕೇಳಿಬಂದಿದೆ.
ಕಂದಾಯ ಸಚಿವ ಅಶೋಕ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ ಬುಡಾ ಅಧ್ಯಕ್ಷ ದಮ್ಮೂರು ಶೇಖರ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ 18 ಗ್ರಾಮಗಳಲ್ಲಿ ಕೆಲವರು ಪ್ರಾಧಿಕಾರದಿಂದ ವಿನ್ಯಾಸ ಅನುಮೋದನೆ ಪಡೆಯದೆ ಸ್ಥಳೀಯ ಸಂಸ್ಥೆಗಳು ವಿತರಿಸುವ ನಮೂನೆ 9 & 11 ಅನ್ನು ಉಲ್ಲೇಖಿಸಿ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ದೂರುಗಳು ಕೇಳಿ ಬಂದಿವೆ ಎಂದು ಅವರು ವಿವರಿಸಿದರು.
ಈ ರೀತಿ ಪ್ರಾಧಿಕಾರದಿಂದ ವಿನ್ಯಾಸ ಅನುಮೋದನೆ ಪಡೆಯದೆ ನೋಂದಣಿ ಮಾಡಿರುವುದು ಅಕ್ರಮವಾಗಿದ್ದು, ಇಂತಹ ಅನಧಿಕೃತ ವಿನ್ಯಾಸಗಳ ನೊಂದಣಿಗಳನ್ನು ಮಾಡಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ನಂತರ ಸಚಿವ ಅಶೋಕ್ ಮನವಿ ಸ್ವೀಕರಿಸಿ, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.