ಬಳ್ಳಾರಿ:ಅನುದಾನರಹಿತ ಖಾಸಗಿ ಶಾಲೆಗಳಿಗೆಬಂದಿರುವ ಹಣವನ್ನು ಬಿಡುಗಡೆ ಮಾಡುವಂತೆ ಅನುದಾನರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಒಕ್ಕೂಟದ ಕಾರ್ಯದರ್ಶಿ ಬಸರೆಡ್ಡಿ, ಹೈದರಾಬಾದ್ ಕರ್ನಾಟಕದ 371 (ಜೆ) ಅಡಿಯಲ್ಲಿ ಶಾಲೆಗಳ ಅಗತ್ಯ ಮೂಲಭೂತ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಹಣ ಬಂದಿದೆ. ಆದರೆ ಅದರ ಬಳಕೆಯಾಗಿಲ್ಲ ಎಂದು ದೂರಿದರು.
1. ಅಗತ್ಯ ಮೂಲಭೂತ ಸೌಲಭ್ಯಗಳಾದ ಆಟದ ಮೈದಾನ, ಶೌಚಾಲಯ, ಕಾಂಪೌಂಡ್, ಕುಡಿಯುವ ನೀರಿನ ವ್ಯವಸ್ಥೆಗೆ ಅನುದಾನ ನೀಡುವುದು.