ಬಳ್ಳಾರಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಆಸ್ಪತ್ರೆಗಳಲ್ಲಿ ಹಾಸಿಗೆಯ ಕೊರತೆ ಉಂಟಾಗಿದ್ದು, ಹೊಸಪೇಟೆ ಮುನ್ಸಿಪಲ್ ಮೈದಾನದ ಒಳ ಕ್ರೀಡಾಂಗಣದಲ್ಲಿ 1000 ಹಾಸಿಗೆಯ ತಾತ್ಕಾಲಿಕ ಕೋವಿಡ್ ಆಸ್ಪತ್ರೆ ಮತ್ತು ಕೋವಿಡ್ ತಪಾಸಣಾ ಕೇಂದ್ರ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಮಾಧ್ಯಮ ವಕ್ತಾರ ಪತ್ರೇಶ ಹಿರೇಮಠ ಮತ್ತು ನಿಂಬಗಲ್ ರಾಮಕೃಷ್ಣ ಒತ್ತಾಯಿಸಿದ್ದಾರೆ.
ಹೊಸಪೇಟೆ ಕ್ರೀಡಾಂಗಣದಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸುವಂತೆ ಮನವಿ - ಕೆಪಿಸಿಸಿ ಮಾಧ್ಯಮ ವಕ್ತಾರ ಪತ್ರೇಶ ಹಿರೇಮಠ ಮತ್ತು ನಿಂಬಗಲ್ ರಾಮಕೃಷ್ಣ
ಕೊರೊನಾ ಸೋಂಕು ಮುಂದಿನ ತಿಂಗಳಲ್ಲಿ ಹೆಚ್ಚಾಗುವ ಸಾಧ್ಯತೆಯಿದೆ. ಒಂದು ವೇಳೆ ಅನುದಾನದ ಕೊರತೆ ಕಂಡು ಬಂದಲ್ಲಿ ಜಿಲ್ಲಾ ಖನಿಜ ನಿಧಿಯಲ್ಲಿ 3 ಸಾವಿರ ಕೋಟಿಗೂ ಅಧಿಕ ಹಣ ಬಳಸಿಕೊಳ್ಳಲು ಮುಂದಾಗಬೇಕೆಂದು ಮನವಿ ಮೂಲಕ ಒತ್ತಾಯಿಸಿದ್ದಾರೆ..
ಈ ಕುರಿತು ಹೊಸಪೇಟೆ ತಹಶೀಲ್ದಾರ್ ಮುಖಾಂತರ ಜಿಲ್ಲಾಧಿಕಾರಿ ನಕುಲ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಕೊರೊನಾ ಸೋಂಕು ಮುಂದಿನ ತಿಂಗಳಲ್ಲಿ ಹೆಚ್ಚಾಗುವ ಸಾಧ್ಯತೆಯಿದೆ. ಒಂದು ವೇಳೆ ಅನುದಾನದ ಕೊರತೆ ಕಂಡು ಬಂದಲ್ಲಿ ಜಿಲ್ಲಾ ಖನಿಜ ನಿಧಿಯಲ್ಲಿ 3 ಸಾವಿರ ಕೋಟಿಗೂ ಅಧಿಕ ಹಣ ಬಳಸಿಕೊಳ್ಳಲು ಮುಂದಾಗಬೇಕೆಂದು ಮನವಿ ಮೂಲಕ ಒತ್ತಾಯಿಸಿದ್ದಾರೆ.
ಆಸ್ಪತ್ರೆ ನಿರ್ಮಾಣ ಮಾಡುವಲ್ಲಿ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಚಿಕಿತ್ಸೆಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ. ಹಾಗಾಗಿ ಮನವಿಯನ್ನು ಗಂಭೀರವಾಗಿ ಪರಿಗಣಿಸುವಂತೆ ಕಾಂಗ್ರೆಸ್ ವಕ್ತಾರರಾದ ಪತ್ರೇಶ್ ಹಿರೇಮಠ ಹಾಗೂ ನಿಂಬಗಲ್ ರಾಮಕೃಷ್ಣ ತಿಳಿಸಿದ್ದಾರೆ.
TAGGED:
Bellary covid hospital