ವಿಜಯನಗರ:ಸಾಲಬಾಧೆಯಿಂದ ನಿವೃತ್ತ ಶಿಕ್ಷಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಬೆಣಕಲ್ ಗ್ರಾಮದಲ್ಲಿ ಶನಿವಾರ ನಡೆದಿದೆ. ಬಿ.ಆರ್. ಕೊಟ್ರಗೌಡ ಎಂಬುವರೇ ಆತ್ಮಹತ್ಯೆ ಮಾಡಿಕೊಂಡವರು.
ಮರಿಯಮ್ಮನಹಳ್ಳಿ ತಾಂಡದ ಸರ್ಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿದ್ದ ಕೊಟ್ರಗೌಡ ಸಾಲಬಾಧೆಯಿಂದ ಜೀವನದಲ್ಲಿ ಜುಗುಪ್ಸೆಗೊಂಡಿದ್ದರು. ಹಗರಿಬೊಮ್ಮನಹಳ್ಳಿ ಪಟ್ಟಣದ ಹೊರವಲಯದ ಕೆಚ್ಚಿನಬಂಡಿ ರಸ್ತೆ ಪಕ್ಕದಲ್ಲೇ ಯಾರು ಇಲ್ಲದ ಸಮಯದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.