ಬಳ್ಳಾರಿ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅನ್ನಭಾಗ್ಯದ 160 ಕ್ವಿಂಟಾಲ್ ಅಕ್ಕಿಯನ್ನು ಕುಡಿತಿನಿ ಪಟ್ಟಣದಲ್ಲಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬಳ್ಳಾರಿ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅನ್ನಭಾಗ್ಯದ 160 ಕ್ವಿಂಟಾಲ್ ಅಕ್ಕಿ ವಶ - Kuditini in Bellary district
ಸರ್ಕಾರದಿಂದ ನೀಡುವ ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಶೆಡ್ ಮೇಲೆ ಅಧಿಕಾರಿಗಳು ದಾಳಿ ನಡೆಸಿ 160 ಕ್ವಿಂಟಾಲ್ ಅಕ್ಕಿ ವಶಕ್ಕೆ ಪಡೆದುಕೊಂಡಿದ್ದಾರೆ.

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅನ್ನ ಭಾಗ್ಯ ಅಕ್ಕಿ ಸೀಜ್
ಶೆಡ್ ಒಂದರಲ್ಲಿ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಡಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಎಸಿ ರಮೇಶ್ ಕೊನರಡ್ಡಿ ದಾಳಿ ನಡೆಸಿದ್ದಾರೆ. ಪ್ರಕರಣ ಸಂಬಂಧ ಶೆಡ್ ಮಾಲೀಕ ದಸ್ತಗಿರಿ ಎನ್ನುವವರ ಮೇಲೆ ಕುಡಿತಿನಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.