ಹೊಸಪೇಟೆ: ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾಟಿನಕಂಬ ಗ್ರಾಮದಲ್ಲಿ ಬೈಕ್ ಸ್ಕಿಡ್ ಆಗಿ ಸಾವರನೊಬ್ಬ ಮೃತಪಟ್ಟಿದ್ದು, ಮತ್ತೊಬ್ಬ ಗಾಯಗೊಂಡ ಘಟನೆ ನಡೆದಿದೆ.
ಕೂಡ್ಲಿಗಿ: ಬೈಕ್ ಸ್ಕಿಡ್ ಆಗಿ ಸವಾರ ಸಾವು
ಬೈಕ್ ಸ್ಕಿಡ್ ಆಗಿ ಸವಾರನೋರ್ವ ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾಟಿನಕಂಬ ಗ್ರಾಮದಲ್ಲಿ ನಡೆದಿದೆ.
ಕೂಡ್ಲಿಗಿ: ಬೈಕ್ ಸ್ಕಿಡ್ ಆಗಿ ಸವಾರ ಸಾವು
ಕಾಟಿನಕಂಬ ಗ್ರಾಮದ ಗೌಡ ಮಲಿಯಪ್ಪ(45) ಮೃತ ವ್ಯಕ್ತಿ. ಅವರ ಪುತ್ರ ಶಾಂತೇಶ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ನಲ್ಲಿ ತೆರಳುತ್ತಿರುವಾಗ ನಾಯಿ ಅಡ್ಡ ಬಂದಿದ್ದು, ಅದನ್ನು ತಪ್ಪಿಸಲು ಹೋಗಿ ಘಟನೆ ನಡೆದಿದೆ ಎನ್ನಲಾಗ್ತಿದೆ.
ಘಟನೆ ಸಂಬಂಧ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.