ಬಳ್ಳಾರಿ:ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿರುವುದಕ್ಕೆ ಆರ್ಟಿಪಿಸಿಆರ್ ಟೆಸ್ಟ್ ಮುಖ್ಯ ಕಾರಣವೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
ನಗರದ ಡಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಆ್ಯಂಟಿಜೆನ್ ಕಿಟ್ಗಳಿಂದ ಕೊರೊನಾ ಟೆಸ್ಟ್ ಮಾಡಲಾಗುತ್ತಿತ್ತು. ಆದರೆ ಈಗ ಆರ್ಟಿಪಿಸಿಆರ್ ಟೆಸ್ಟ್ ಬೆಸ್ಟ್ ಅನ್ನಿಸುತ್ತಿದ್ದು, ಹೆಚ್ಚೆಚ್ಚು ಟೆಸ್ಟ್ ಮಾಡಲಾಗುತ್ತಿದೆ. ಇದರಿಂದ ಸೋಂಕಿತರನ್ನು ಬಹುಬೇಗನೆ ಪತ್ತೆ ಹಚ್ಚಬಹುದು. ಪ್ರತಿದಿನ ಅಂದಾಜು 2800ರಿಂದ 3000 ಮಂದಿಯನ್ನ ಈ ಕೋವಿಡ್ ಟೆಸ್ಟ್ಗೆ ಒಳಪಡಿಸಲಾಗುತ್ತಿದೆ ಎಂದರು.