ಹೊಸಪೇಟೆ:ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆ ತಾಲೂಕಿನ ಸರ್ಕಾರಿ ಶಾಲೆಯೊಂದರ ಮುಖ್ಯ ಶಿಕ್ಷಕನನ್ನು ಅಮಾನತು ಮಾಡಿ ಬಳ್ಳಾರಿ ಡಿಡಿಪಿಐ ಸಿ.ರಾಮಪ್ಪ ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಶಾಲೆಯೊಂದರ ಮುಖ್ಯ ಶಿಕ್ಷಕ ಟಿ.ಜಂಬಣ್ಣ ಎಂಬಾತನ ವಿರುದ್ಧ ಲೈಂಗಿಕ ಕಿರುಕುಳ ಕುರಿತು ವಿದ್ಯಾರ್ಥಿನಿಯರು ಹೊಸಪೇಟೆ ಬಿಇಒ ಸುನಾಂದ ಅವರಿಗೆ ಲಿಖಿತ ದೂರು ನೀಡಿದ್ದರು. ಮೇಲ್ನೋಟಕ್ಕೆ ಶಿಕ್ಷಕನ ವಿರುದ್ಧದ ಆರೋಪ ಸಾಬೀತಾಗಿದೆ. ಹೀಗಾಗಿ ಶಿಕ್ಷಕ ಜಂಬಣ್ಣನನ್ನು ಕರ್ನಾಟಕ ನಾಗರೀಕ ಸೇವೆ ನಿಯಮಗಳಡಿ ಅಮಾನತು ಮಾಡಲಾಗಿದೆ.