ಬಳ್ಳಾರಿ: ಜಿಲ್ಲೆಯ ಬಳ್ಳಾರಿ ತಾಲೂಕು, ರಾಮಸಾಗರ ಮತ್ತು ಇನ್ನಿತರ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನೆ ಮುಂದುವರೆಸಿದ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು.
ಬಳ್ಳಾರಿ; ಏಳನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ನಿಗದಿತ 12 ಸಾವಿರ ವೇತನ ಜಾರಿಗೊಳಿಸಿ, ಸುರಕ್ಷತಾ ಸಾಮಗ್ರಿಗಳನ್ನು ಒದಗಿಸಬೇಕು ಎಂದು ಆಶಾ ಕಾರ್ಯಕರ್ತೆಯರು ಸರ್ಕಾರಕ್ಕೆ ಆಗ್ರಹಿಸಿದರು. ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಇಂದಿಗೆ ಏಳನೇ ದಿನಕ್ಕೆ ಕಾಲಿಟ್ಟಿದೆ
ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ರಾಜ್ಯ ಸರ್ಕಾರದ ನಿರ್ಲಕ್ಷಕ್ಕೆ ಧಿಕ್ಕಾರ, ಆಶಾ ಕಾರ್ಯಕರ್ತೆಯರಿಗೆ ನಿಗದಿತ 12,000 ವೇತನ ಜಾರಿಗೊಳಿಸಿ, ಸುರಕ್ಷತಾ ಸಾಮಗ್ರಿಗಳನ್ನು ಒದಗಿಸಿಬೇಕು ಎಂದು ಘೋಷಣೆ ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಗೌರವ ಅಧ್ಯಕ್ಷೆ ಎ. ಶಾಂತ ಮತ್ತು ಆಶಾ ಕಾರ್ಯಕರ್ತೆಯರಾದ ಗೀತಾ, ಅಂಬಿಕಾ, ರಾಜೇಶ್ವರಿ, ಗೌರಮ್ಮ, ವೀರಮ್ಮ, ರಾಮಕ್ಕ, ರೇಷ್ಮ ಮತ್ತು ನೂರಾರು ಕಾರ್ಯಕರ್ತೆಯರು ಭಾಗವಹಿಸಿದ್ದರು.