ಬಳ್ಳಾರಿ: ಮದುವೆಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಅಡಿ ಯುವಕನನ್ನ ಬಂಧಿಸಲಾಗಿದೆ. ಜಿಲ್ಲೆಯ ಗುಡೇಕೋಟೆ ಠಾಣಾ ವ್ಯಾಪ್ತಿಗೆ ಒಳಪಡುವ ಸಂಡೂರು ತಾಲೂಕಿನಲ್ಲಿ ಘಟನೆ ನಡೆದಿದೆ.
ಮದುವೆ ನೆಪದಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ - ರೇಪ್
ಮದುವೆ ನೆಪದಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ಕೈ ಕೊಟ್ಟ ಆರೋಪಿಯನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ
ವೀರೇಶ ಬಂಧಿತ ಆರೋಪಿ. ಮದುವೆ ಆಗುವುದಾಗಿ ನಂಬಿಸಿ 15 ವರ್ಷದ ಬಾಲಕಿ ಮೇಲೆ ಅದೇ ಗ್ರಾಮದ ಯುವಕ ವೀರೇಶ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಬಳಿಕ ಮದುವೆ ಆಗಲು ನಿರಾಕರಿಸಿದ ಹಿನ್ನೆಲೆ ಬಾಲಕಿ ತನ್ನ ಪೋಷಕರಿಗೆ ಈ ವಿಷಯ ತಿಳಿಸಿದ್ದಾಳೆ.
ನಂತರ ಬಾಲಕಿಯ ಪೋಷಕರು ಗುಡೇಕೋಟೆ ಠಾಣೆಗೆ ಬಂದು ದೂರು ನೀಡಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಕಾರ್ಯಪ್ರವೃತ್ತರಾದ ಪಿಎಸ್ಐ ಶಂಕರ ಲಮಾಣಿ ಅವರು ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.