ಹೊಸಪೇಟೆ :ಶಂಕರ ಆನಂದ ಸಿಂಗ್ ಕಾಲೇಜಿನಲ್ಲಿ ಸ್ಕಾಲರ್‌ಶಿಪ್ ಹೆಸರಿನಲ್ಲಿ ಶುಲ್ಕ ಪಡೆಯುತ್ತಿರುವುದನ್ನು ವಿರೋಧಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕಾರ್ಯಕರ್ತರು ಪ್ರತಿಭಟಿಸಿದರು.
ಸ್ಕಾಲರ್‌ಶಿಪ್ ಹೆಸರಿನಲ್ಲಿ ಶುಲ್ಕ ಪಡೆಯುತ್ತಿರುವುದಕ್ಕೆ ವಿರೋಧ - Hospete latest news
ಇದರಿಂದ ಬಡ ವಿದ್ಯಾರ್ಥಿಗಳಿಗೆ ತೊಂದ್ರೆ ಆಗಲಿದೆ. ಕೂಡಲೇ ಹೆಚ್ಚುವರಿ ಶುಲ್ಕ ಪಡೆಯುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು..
Protest
ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಶುಲ್ಕ ಪಾವತಿಸಿದ್ದರೂ ಒಬಿಸಿ(2ಎ) ವಿದ್ಯಾರ್ಥಿಗಳಿಂದ ಹೆಚ್ಚುವರಿ 5,140 ರೂ. ಪಡೆಯಲಾಗುತ್ತದೆ. ಆದರೆ, ಇತರೆ ಪಾವತಿಸಲು ಸರ್ಕಾರದ ಆದೇಶದ ಮೂಲಕ ಸುತ್ತೋಲೆ ಹೊರಡಿಸಿಲ್ಲ.
ಆದರೆ, ಕಾಲೇಜಿನಲ್ಲಿ ಮಾತ್ರ ಪ್ರಾಂಶುಪಾಲರು ಶುಲ್ಕ ಪಡೆಯಲು ಮುಂದಾಗಿದ್ದಾರೆ ಎಂದು ಆರೋಪಿಸಿದರು. ಇದರಿಂದ ಬಡ ವಿದ್ಯಾರ್ಥಿಗಳಿಗೆ ತೊಂದ್ರೆ ಆಗಲಿದೆ. ಕೂಡಲೇ ಹೆಚ್ಚುವರಿ ಶುಲ್ಕ ಪಡೆಯುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.