ಜಿಲ್ಲಾ ಉಸ್ತುವಾರಿ ಸಚಿವ ಬಿ ನಾಗೇಂದ್ರ ಬಳ್ಳಾರಿ:ಕಳೆದ ಎರಡು ತಿಂಗಳಿಂದ ಖಾಲಿ ಇದ್ದ ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಆಯ್ಕೆಯ ವಿಚಾರಕ್ಕೆ ಇಂದು ತೆರೆ ಬಿದ್ದಿದೆ. ಬುಧವಾರ ನಡೆದ ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಳ್ಳಾರಿ ನಗರದ 31 ವಾರ್ಡ್ನ ಸದಸ್ಯೆ ಶ್ವೇತಾ ಬಿ ಅವರು ಮೇಯರ್ ಆಗಿ ಆಯ್ಕೆ ಆಗಿದ್ದಾರೆ. ಶ್ವೇತಾ ಅವರು 29 ಮತಗಳನ್ನು ಪಡೆದಿದ್ದಾರೆ.
ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಶ್ವೇತಾ ಬಿ ಸೇರಿದಂತೆ ಕಾಂಗ್ರೆಸ್‌ನಿಂದ ಮೂವರು ನಾಮಪತ್ರ ಸಲ್ಲಿಸಿದ್ದರು. ಆದರೇ ಕೊನೆ ಗಳಿಗೆಯಲ್ಲಿ ಮಿಂಚು ಶ್ರೀನಿವಾಸ್ ಹಾಗು ಕುಬೇರ ನಾಮಪತ್ರ ವಾಪಸ್ ಪಡೆದಿದ್ದಾರೆ.
ಮೇಯರ್ ಆಗಿ ಆಯ್ಕೆಯಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಬಿ ನಾಗೇಂದ್ರ ಅವರು, ಮಹಾನಗರ ಪಾಲಿಕೆ ಸದಸ್ಯರಲ್ಲಿ ಯಾವುದೇ ಗೊಂದಲ ಇಲ್ಲ. ಶಾಸಕ ನಾರಾ ಭರತ್ ರೆಡ್ಡಿ ನನ್ನ ನಡುವೆ ಭಿನ್ನಾಭಿಪ್ರಾಯ ಇಲ್ಲ. ನಾವೆಲ್ಲಾ ಒಂದಾಗಿದ್ದೇವೆ, ಒಗ್ಗಟ್ಟಾಗಿದ್ದೇವೆ. ಪಕ್ಷದ ಸಿದ್ಧಾಂತದ ಪ್ರಕಾರ ನಾವೆಲ್ಲಾ ಕೆಲಸ ಮಾಡುತ್ತಿದ್ದೇವೆ. ನಗರದ ಅಭಿವೃದ್ಧಿಗೆ ಒಂದಾಗಿ ಶ್ರಮಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಸೇರಿದಂತೆ ಇನ್ನಿತರೆ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.
ಇದನ್ನೂ ಓದಿ:ಕೇಂದ್ರದಿಂದ ದುರುದ್ದೇಶವಿಲ್ಲ; ರಾಜ್ಯದ ಟ್ಯಾಬ್ಲೋ ಕೈಬಿಟ್ಟದ್ದನ್ನು ಸಮರ್ಥಿಸಿಕೊಂಡ ಬಿ ವೈ ವಿಜಯೇಂದ್ರ