ಹೊಸಪೇಟೆ: ಕರ್ನಾಟಕದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅನರ್ಹ. ಚುನಾವಣೆಯಲ್ಲಿ ಜನರು ಅವರಿಗೆ ತಕ್ಕ ಪಾಠ ಕಲಿಸುತ್ತಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿಕಾರಿದರು.
ಕರ್ನಾಟಕದಲ್ಲಿ ಸಿದ್ದರಾಮಯ್ಯ ಅನರ್ಹ: ನಳಿನ್ ಕುಮಾರ್ ಕಟೀಲ್ - latest naleen kumar katil news
ಕರ್ನಾಟಕದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅನರ್ಹ. ಚುನಾವಣೆಯಲ್ಲಿ ಜನರು ಅವರಿಗೆ ತಕ್ಕ ಪಾಠ ಕಲಿಸುತ್ತಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿಕಾರಿದರು.
ಹೊಸಪೇಟೆಯಲ್ಲಿ ಮಾತನಾಡಿದ ಕಟೀಲ್, ಕಾಂಗ್ರೆಸ್ ಪಕ್ಷವು ದಿನದಿಂದ ದಿನಕ್ಕೆ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಪಕ್ಷದಲ್ಲಿ ಬಿರುಕು ಉಂಟಾಗಿದ್ದು, ನಾಯಕರಲ್ಲಿ ಹೊಂದಾಣಿಕೆಯಿಲ್ಲದಂತಾಗಿದೆ. ರಾಜ್ಯದಲ್ಲಿ ಹಾಗೂ ದೇಶದಲ್ಲಿ ಕಾಂಗ್ರೆಸ್ ಪಕ್ಷ ಕಣ್ಮೆರೆಯಾಗುತ್ತಿದೆ ಎಂದರು.
ಸಮ್ಮಿಶ್ರ ಸರ್ಕಾರದಲ್ಲಿನ ಕಿತ್ತಾಟವನ್ನು ನೋಡಲಾರದೆ 17 ಜನ ಶಾಸಕರು ರಾಜೀನಾಮೆ ನೀಡಿದ್ದಾರೆ. ಸರ್ಕಾರದ ಉಳಿವಿಗಾಗಿ ಸಮ್ಮಿಶ್ರ ಸರ್ಕಾರ ಮಾಡಿಕೊಂಡರೇ ಹೊರತು ಅಭಿವೃದ್ಧಿಗೆ ಒತ್ತು ನೀಡಲಿಲ್ಲ ಎಂದರು. ಇನ್ನೂನ್ನು ವಿಜಯನಗರದ ಉಪ ಚುನಾವಣೆಯಲ್ಲಿ ಆನಂದ್ ಸಿಂಗ್ ಅವರು ಬಹುಮತದಿಂದ ಗೆಲ್ಲುತ್ತಾರೆ. ರಾಜ್ಯದಲ್ಲಿ 15 ಕ್ಷೇತ್ರದಲ್ಲಿ ಬಿಜೆಪಿಯ ಕಮಲ ಅರಳುತ್ತದೆ. ಬಿಎಸ್ವೈ ಸರ್ಕಾರದಲ್ಲಿ ವಿಜಯನಗರ ಕ್ಷೇತ್ರ ಸಂಪೂರ್ಣ ಅಭಿವೃದ್ಧಿಯಾಗಲಿದೆ ಎಂದರು.