ಬಳ್ಳಾರಿ: ಕೊರೊನಾ ಸೋಂಕು ವ್ಯಾಪಕವಾಗಿರುವ ಕಾರಣ ಈ ವರ್ಷ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಗಿದೆ ಎಂದು ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ ತಿಳಿಸಿದರು.
ಬಳ್ಳಾರಿಯಲ್ಲಿ ಸರಳವಾಗಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ - Valmiki Jayanti celebration
ಬಳ್ಳಾರಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಶಾಸಕ ಜಿ.ಸೋಮಶೇಖರ್ ರೆಡ್ಡಿ ಚಾಲನೆ ನೀಡಿದರು.
![ಬಳ್ಳಾರಿಯಲ್ಲಿ ಸರಳವಾಗಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ bellary](https://etvbharatimages.akamaized.net/etvbharat/prod-images/768-512-9375881-385-9375881-1604124356075.jpg)
ನಗರದ ಜಿಲ್ಲಾ ಕ್ರೀಡಾಂಗಣ ಹತ್ತಿರದ ಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಶಾಸಕ ಜಿ.ಸೋಮಶೇಖರ್ ರೆಡ್ಡಿ ಪುಷ್ಪ ಮಾಲೆ ಹಾಕುವ ಮೂಲಕ ಚಾಲನೆ ನೀಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಜಿ.ಸೋಮಶೇಖರ್ ರೆಡ್ಡಿ, ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಈ ವರ್ಷ ಕೊರೊನಾ ಸೋಂಕು ಇರುವ ಕಾರಣ ಸರಳವಾಗಿ ಆಚರಣೆ ಮಾಡಲಾಗಿದೆ. ಸಾರ್ವಜನಿಕರು ಮಾಸ್ಕ್ ಹಾಕುವುದು, ಸಾಮಾಜಿಕ ಅಂತರ ಕಾಯ್ದುಕೊಂಡು ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸಬೇಕು ಎಂದು ತಿಳಿಸಿದರು.
ಈ ಸಂದರ್ಭ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಎಸ್ಪಿ ಸೈದುಲು ಅಡಾವತ್, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಆರ್.ನಂದಿನಿ, ಡಿವೈಎಸ್ಪಿ ರಮೇಶ್ ಕುಮಾರ್, ಮಹಾನಗರ ಪಾಲಿಕೆಯ ಪ್ರಭಾರಿ ಆಯುಕ್ತ ಈರಪ್ಪ ಬಿರಾದಾರ ಸೇರಿದಂತೆ ಇತರ ಪ್ರಮುಖರು ಭಾಗವಹಿಸಿದ್ದರು.