ಬಳ್ಳಾರಿ/ ಹೊಸಪೇಟೆ:ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳ ಒಟ್ಟು 6 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಖಾಯಿಲೆ ಪತ್ತೆಯಾಗಿದೆ.
ಬಳ್ಳಾರಿ ಜಿಲ್ಲೆಯ ಐವರು ಮತ್ತು ವಿಜಯನಗರ ಜಿಲ್ಲೆ ಹರಪ್ಪನಹಳ್ಳಿ ತಾಲೂಕಿನ ನಿಲಗುಂದದ ವ್ಯಕ್ತಿಯಲ್ಲಿ ಹೊಸ ರೋಗ ಕಂಡು ಬಂದಿದೆ. ಬಳ್ಳಾರಿಯ ಐದು ಮಂದಿ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವಿಜಯನಗರದ ವ್ಯಕ್ತಿಯನ್ನು ಹುಬ್ಬಳ್ಳಿಯ ಆಸ್ಪತ್ರೆಗೆ ಕಳುಹಿಸಲಾಗಿದೆ.