ಕರ್ನಾಟಕ

karnataka

ETV Bharat / state

ಶಾಸಕ ಸೋಮಶೇಖರ ರೆಡ್ಡಿ ಪ್ರಚೋದನಕಾರಿ ಭಾಷಣ ಹಿನ್ನೆಲೆ: ಕಾಂಗ್ರೆಸ್ ದೂರು - ಸೋಮಶೇಖರರೆಡ್ಡಿ ಪ್ರಚೋದನಕಾರಿ ಭಾಷಣ

ಸಿಎಎ, ಎನ್​ಆರ್​ಸಿ ಕಾಯ್ದೆ ಬೆಂಬಲಿಸಿ ನಾಗರಿಕರ ವೇದಿಕೆಯಿಂದ ನಗರದ ಗಡಿಗಿ ಚನ್ನಪ್ಪ ವೃತ್ತದಲ್ಲಿ ಬಹಿರಂಗ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಶಾಸಕ ಜಿ.ಸೋಮಶೇಖರ ರೆಡ್ಡಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾಂಗ್ರೆಸ್ ಜಿಲ್ಲಾ ಘಟಕ, ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಡಿವೈಎಸ್​ಪಿ ರಾಮರಾವ್ ಅವರಿಗೆ ದೂರು ನೀಡಿದ್ದಾರೆ.

ಕಾಂಗ್ರೆಸ್ ದೂರು ದಾಖಲು!
Congress lodges complaint!

By

Published : Jan 4, 2020, 7:14 AM IST

ಬಳ್ಳಾರಿ :ಎನ್​ಆರ್​ಸಿ, ಸಿಎಎ ಕಾಯ್ದೆ ಬೆಂಬಲಿಸಿ ನಡೆದ ಬಹಿರಂಗ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಶಾಸಕ ಜಿ.ಸೋಮಶೇಖರ ರೆಡ್ಡಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾಂಗ್ರೆಸ್ ಜಿಲ್ಲಾ ಘಟಕ, ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಡಿವೈಎಸ್​ಪಿ ರಾಮರಾವ್ ಅವರಿಗೆ ದೂರು ನೀಡಿದ್ದಾರೆ.

ದೂರಿನ ಪ್ರತಿ

ಸಿಎಎ, ಎನ್​ಆರ್​ಸಿ ಕಾಯ್ದೆಯನ್ನು ಬೆಂಬಲಿಸಿ ನಾಗರಿಕರ ವೇದಿಕೆಯಿಂದ ನಗರದ ಗಡಿಗಿ ಚನ್ನಪ್ಪ ವೃತ್ತದಲ್ಲಿ ಬಹಿರಂಗ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಶಾಸಕ ಜಿ.ಸೋಮಶೇಖರ ರೆಡ್ಡಿ, ಕಾಂಗ್ರೆಸ್ ಪಕ್ಷದ ಮುಖಂಡರ ವಿರುದ್ಧ ಕೀಳು ಮಟ್ಟದ ಶಬ್ದಗಳನ್ನು ಬಳಸಿದ್ದಾರೆ. ಪೌರತ್ವ (ತಿದ್ದುಪಡಿ) ಕಾಯ್ದೆ ಒಪ್ಪದವರು, ವಿರೋಧಿಸುವವರು ದೇಶವನ್ನು ಬಿಟ್ಟು ಹೋಗಿ ಎಂಬಂತಹ ಪ್ರಚೋದನಕಾರಿ ಮಾತುಗಳನ್ನಾಡಿದ್ದಾರೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜೆ.ಎಸ್.ಆಂಜನೇಯಲು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಬಳಿಕ ಮಾತನಾಡಿದ ಪ್ರಚಾರ ಸಮಿತಿ ಅಧ್ಯಕ್ಷ ಜೆ.ಎಸ್. ಆಂಜನೇಯಲು, ಕಾಯ್ದೆಗಳನ್ನು ತಿದ್ದುಪಡಿ ಮಾಡುವ ಅಧಿಕಾರ ಸರ್ಕಾರಕ್ಕೂ ಇದೆ. ಅದನ್ನು ವಿರೋಧಿಸುವ ಅಧಿಕಾರ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಗೂ ಇದೆ. ಆದರೆ ಕಾಯ್ದೆಯನ್ನು ವಿರೋಧಿಸುವವರು ದೇಶ ಬಿಟ್ಟು ಹೋಗಿ ಎನ್ನುವುದಕ್ಕೆ ಇವರು ಯಾರು? ಎಂದು ವಾಗ್ದಾಳಿ ನಡೆಸಿದರು.

ABOUT THE AUTHOR

...view details