ಬಳ್ಳಾರಿ: ನೂಲ ಹುಣ್ಣಿಮೆ ನಿಮಿತ್ತ ಗಣಿ ಜಿಲ್ಲೆಯ ಹೊಸಪೇಟೆ ತಾಲೂಕಿನ ವಿಶ್ವ ಪ್ರಸಿದ್ಧ ಹಂಪಿ ವಿರೂಪಾಕ್ಷೇಶ್ವರ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ನೂಲ ಹುಣ್ಣಿಮೆ ನಿಮಿತ್ತ ಹಂಪಿ ವಿರೂಪಾಕ್ಷೇಶ್ವರನಿಗೆ ವಿಶೇಷ ಪೂಜೆ… - Special worship to Virupaksha statue
ನೂಲ ಹುಣ್ಣಿಮೆ ಅಂಗವಾಗಿ ಹಂಪಿಯ ಪ್ರಸಿದ್ಧ ವಿರೂಪಾಕ್ಷೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತರು ನದಿಯಲ್ಲಿ ಸ್ನಾನ ಮಾಡಿ, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.
Special worship to Hampi Virupaksha statue
ಬೆಳಿಗ್ಗೆ ವಿರೂಪಾಕ್ಷೇಶ್ವರನಿಗೆ ಅರ್ಚಕರು ವಿಶೇಷ ಪೂಜೆ ನೆರವೇರಿಸಿದರು. ಬಳಿಕ, ನೂಲಿನಿಂದ ವಿರೂಪಾಕ್ಷ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಯಿತು. ಇದೇ ವೇಳೆ ಪಂಪಾಂಬಿಕೆ ಹಾಗೂ ಭುವನೇಶ್ವರಿ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.
ಶ್ರಾವಣ ಮಾಸದ ಎರಡನೇ ಸೋಮವಾರ ಹಾಗೂ ನೂಲ ಹುಣ್ಣಿಮೆ ನಿಮಿತ್ತ ಹತ್ತಾರು ಭಕ್ತರು ನದಿಯಲ್ಲಿ ಸ್ನಾನ ಮಾಡಿ, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಕೊಪ್ಪಳ, ಬಳ್ಳಾರಿ, ರಾಯಚೂರು ಸೇರಿದಂತೆ ನಾನಾ ಭಾಗಗಳಿಂದ ಭಕ್ತರು ವಿರೂಪಾಕ್ಷ ದೇಗುಲಕ್ಕೆ ಆಗಮಿಸಿದ್ದರು.