ಕರ್ನಾಟಕ

karnataka

ETV Bharat / state

ಶ್ರೀರಾಮುಲುಗೆ ಡಿಸಿಎಂ ಪಟ್ಟಕ್ಕೆ ಆಗ್ರಹ: ಅಭಿಮಾನಿಗಳಿಂದ ಪ್ರತಿಭಟನೆ - kannadanews

ಉಪ ಮುಖ್ಯಮಂತ್ರಿ ಪಟ್ಟ ನೀಡುವಂತೆ ಆಗ್ರಹಿಸಿ ಬಳ್ಳಾರಿಯಲ್ಲಿ ಶ್ರೀರಾಮುಲು ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ.

ಸಚಿವ ಶ್ರೀರಾಮುಲುಗೆ ಡಿಸಿಎಂ ಪಟ್ಟಕ್ಕೆ ಆಗ್ರಹಿಸಿ ಪ್ರತಿಭಟನೆ

By

Published : Aug 27, 2019, 11:37 PM IST

ಬಳ್ಳಾರಿ:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲುಗೆ ಉಪ ಮುಖ್ಯಮಂತ್ರಿ ಪಟ್ಟ ನೀಡಬೇಕೆಂದು ಆಗ್ರಹಿಸಿ ಬಳ್ಳಾರಿಯಲ್ಲಿಂದು ಪ್ರತಿಭಟನೆ ನಡೆಸಲಾಯ್ತು.

ಸಚಿವ ಶ್ರೀರಾಮುಲುಗೆ ಡಿಸಿಎಂ ಪಟ್ಟಕ್ಕೆ ಆಗ್ರಹಿಸಿ ಪ್ರತಿಭಟನೆ

ಬಳ್ಳಾರಿಯ ಎಪಿಎಂಸಿ ಮಾರುಕಟ್ಟೆ ವೃತ್ತದಲ್ಲಿಂದು ಪಾಲಿಕೆಯ ಸದಸ್ಯ ಎಂ.ಗೋವಿಂದರಾಜಲು ನೇತೃತ್ವದ ಅಭಿಮಾನಿ ಬಳಗದ ಕಾರ್ಯಕರ್ತರು ಸೇರಿಕೊಂಡು ಬಿಜೆಪಿ ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿದರು. ಬಳಿಕ ಬೇಕೇಬೇಕು ಡಿಸಿಎಂ ಪಟ್ಟ ಎಂದು ಜೈಕಾರ ಹಾಕಿದ್ದಾರೆ. ಬಿ.ಶ್ರೀರಾಮುಲು ವಾಲ್ಮೀಕಿ ಸಮುದಾಯದ ಪ್ರಬಲ ನಾಯಕರಾಗಿದ್ದು, ಉತ್ತರ ಕರ್ನಾಟಕ, ಹೈ-​ಕ ಭಾಗದಲ್ಲಿ ಜನಮನ್ನಣೆ ಗಳಿಸಿದ್ದಾರೆ. ಕೇವಲ ದಕ್ಷಿಣ ಕರ್ನಾಟಕ ಭಾಗದ ಜನಪ್ರತಿನಿಧಿಗಳಿಗೆ ಮಾತ್ರ ಸಿಎಂ, ಡಿಸಿಎಂ ಹುದ್ದೆಗಳಾದ್ರೆ, ಈ ಭಾಗದ ಜನಪ್ರತಿನಿಧಿಗಳಿಗೆ ಕೇವಲ ಸಚಿವ ಸ್ಥಾನಕ್ಕೆ ಸೀಮಿತಗೊಳಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

...view details