ಬಳ್ಳಾರಿ: 40 ವರ್ಷಗಳ ಸುದೀರ್ಘ ಹೋರಾಟದ ಬಳಿಕ ಬಿ.ಎಸ್.ಯಡಿಯೂರಪ್ಪ ಸಿಎಂ ಆಗುತ್ತಿದ್ದಾರೆ. ಅವರು ಮುಖ್ಯಮಂತ್ರಿ ಆಗಬೇಕೆಂಬ ಆಸೆ ನನ್ನದಾಗಿತ್ತು ಎಂದು ಮೊಳಕಾಲ್ಮೂರು ಶಾಸಕ ಶ್ರೀರಾಮುಲು ತಿಳಿಸಿದ್ದಾರೆ.
ನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಶ್ರೀರಾಮುಲು, ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿ ತೊಡಗಿದ್ದ ಬಿಎಸ್ವೈ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಬೇಕೆಂಬುದೇ ನನ್ನ ಮೊದಲ ಆದ್ಯತೆ ಆಗಿತ್ತು. ಹೀಗಾಗಿ, ಈ ದಿನ ಸಂಜೆ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸೋದು ನನಗೆ ಖುಷಿ ತಂದಿದೆ. ನನ್ನನ್ನ ಪ್ರಮಾಣ ಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಹೀಗಾಗಿ, ಬೆಂಗಳೂರಿಗೆ ತೆರಳುತ್ತಿರುವೆ ಎಂದು ಹರ್ಷ ವ್ಯಕ್ತಪಡಿಸಿದರು.
ಡಿಸಿಎಂ ಹುದ್ದೆಯ ಆಕಾಂಕ್ಷಿ ನಾನಲ್ಲ :