ಕರ್ನಾಟಕ

karnataka

ETV Bharat / state

ಸಿಎಂ ಯಾರಿಗೂ ಅನ್ಯಾಯ ಮಾಡುವುದಿಲ್ಲ: ಎಸ್.ಟಿ.ಸೋಮಶೇಖರ್ - ಎಸ್.ಟಿ ಸೋಮಶೇಖರ್ ಸಂಬಂಧಿತ ಸುದ್ದಿ

ಬಿಜೆಪಿಯಲ್ಲಿ ಯಾರಿಗೂ ಅನ್ಯಾಯವಾಗುವುದಿಲ್ಲ. ಸಿಎಂ ಮಾತಿಗೆ ತಕ್ಕಂತೆ ನಡೆಯುತ್ತಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಸಚಿವ ಎಸ್.ಟಿ ಸೋಮಶೇಖರ್
ಸಚಿವ ಎಸ್ಸಚಿವ ಎಸ್.ಟಿ ಸೋಮಶೇಖರ್.ಟಿ ಸೋಮಶೇಖರ್

By

Published : Nov 19, 2020, 5:24 PM IST

ಹೊಸಪೇಟೆ:ಕೊಟ್ಟ ಮಾತಿನಂತೆ ಸಿಎಂ ನಡೆದುಕೊಳ್ಳುತ್ತಿದ್ದಾರೆ. ಕ್ಯಾಬಿನೆಟ್​ಗೆ ಸೇರಿಸಿಕೊಳ್ಳುವುದು ಸಿಎಂ ಪರಮಾಧಿಕಾರ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, "ಬಿಜೆಪಿಗೆ ಬಂದ ಯಾರಿಗೂ ಸಿಎಂ ಅನ್ಯಾಯ ಮಾಡುವುದಿಲ್ಲ. ಎಲ್ಲರೂ ಒಗ್ಗಟ್ಟಾಗಿದ್ದೇವೆ. ಬೇರೆಯವರನ್ನು ಕರೆತರುವ ಅವಶ್ಯಕತೆ ಇಲ್ಲ. ಈಗಾಗಲೇ ಪೂರ್ಣ ಪ್ರಮಾಣದ ಶಾಸಕರಿದ್ದೇವೆ" ಎಂದು ಹೇಳಿದರು.

ನಮ್ಮ ಪಕ್ಷದ ಸಂಪ್ರದಾಯದಂತೆ ಹೈಕಮಾಂಡ್​ಗೆ ಮಾಹಿತಿ ನೀಡಿದ್ದಾರೆ. ಹೈಕಮಾಂಡ್ ಒಪ್ಪಿಗೆ ನೀಡಿದ ನಂತರ ಸಂಪುಟ ವಿಸ್ತರಣೆ ಆಗಲಿದೆ ಎಂದರು.

ಸಚಿವ ಎಸ್.ಟಿ.ಸೋಮಶೇಖರ್

ಬಳ್ಳಾರಿ ಜಿಲ್ಲೆ ವಿಭಜನೆಯನ್ನು ಎಲ್ಲರೂ ಸ್ವಾಗತಿಸಿದ್ದಾರೆ. ಸಚಿವ ಶ್ರೀರಾಮುಲು ಸಹ ಸಮ್ಮತಿಸಿದ್ದಾರೆ. ಶಾಸಕ ಸೋಮಶೇಖರ ರೆಡ್ಡಿ ನಮ್ಮವರೇ. ಅವರನ್ನು ಕರೆದು ಪಕ್ಷದ ವೇದಿಕೆಯಲ್ಲಿ ಮಾತನಾಡುತ್ತೇವೆ. ಸಣ್ಣಪುಟ್ಟ ವಿರೋಧ ಸಾಮಾನ್ಯ ಇದ್ದೇ ಇರುತ್ತೆ. ಕೆಲ ಶಾಸಕರು ಬಿಜೆಪಿ ರಾಜ್ಯಾಧ್ಯಕ್ಷರಿಗೆ ದೂರು ನೀಡಿರುವುದು ಸುಳ್ಳು. ಇಂತಹ ಯಾವುದೇ ಬೆಳವಣಿಗೆ ಬಿಜೆಪಿಯಲ್ಲಿ ಆಗಿಲ್ಲ ಎಂದು ಹೇಳಿದರು.

ABOUT THE AUTHOR

...view details