ಹೊಸಪೇಟೆ: ಇಂದು ಸಂಜೆ ವಿಶ್ವ ವಿಖ್ಯಾತ ಹಂಪಿಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಡಾ. ಸಂಜೀವ್ ಕುಮಾರ್ ಕುಟುಂಬ ಸಮೇತವಾಗಿ ಭೇಟಿ ನೀಡಿದರು.
ಹಂಪಿಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಡಾ. ಸಂಜೀವ್ ಕುಮಾರ್ ಭೇಟಿ - ರಾಜ್ಯ ಮುಖ್ಯ ಚುನಾವಣಾಧಿಕಾರಿ ಡಾ ಸಂಜೀವ್ ಕುಮಾರ್
ಕುಟುಂಬ ಸಮೇತ ಹಂಪಿಗೆ ಭೇಟಿ ನೀಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಡಾ. ಸಂಜೀವ್ ಕುಮಾರ್, ಹಂಪಿಯ ಆರಾಧ್ಯದೈವ ವಿರೂಪಾಕ್ಷೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಪಂಪಾಂಬಿಕೆ ಹಾಗೂ ಭುವನೇಶ್ವರಿ ದೇವಿಯ ದರ್ಶನ ಪಡೆದರು.
ರಾಜ್ಯ ಮುಖ್ಯ ಚುನಾವಣಾಧಿಕಾರಿ
ಹಂಪಿಯ ಆರಾಧ್ಯದೈವ ವಿರೂಪಾಕ್ಷೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಪಂಪಾಂಬಿಕೆ ಹಾಗೂ ಭುವನೇಶ್ವರಿ ದೇವಿಯ ದರ್ಶನ ಪಡೆದರು. ವಿಜಯ ವಿಠ್ಠಲ ದೇವಾಲಯ, ಕಲ್ಲಿನ ತೇರು ಸೇರಿದಂತೆ ನಾನಾ ಸ್ಮಾರಕಗಳ ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು. ನಾಳೆಯೂ ಹಂಪಿಯ ಸ್ಮಾರಕಗಳನ್ನು ಕಣ್ತುಂಬಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.