ಬಳ್ಳಾರಿ:ಯುಪಿಎ ಸರ್ಕಾರದ ಅವಧಿಯಲ್ಲಿ ಜಾರಿಯಾದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಇರದಿದ್ದರೆ ಹಸಿವಿನಿಂದ ಸಾಯುವವರ ಸಂಖ್ಯೆ ಹೆಚ್ಚಾಗುತ್ತಿತ್ತು ಎಂದು ಮಹಿಳಾ ಕಾಂಗ್ರೆಸ್ನ ರಾಜ್ಯ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ ಕಳವಳ ವ್ಯಕ್ತಪಡಿಸಿದರು.
ನಗರದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಇಡೀ ದೇಶವೇ ಕೋವಿಡ್ ಸೋಂಕಿನ ಭಯದಲ್ಲಿ ನಲುಗಿ ಹೋಗಿದೆ. ಇದರಿಂದ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ. ರೈತಾಪಿ ವರ್ಗ ಹಾಗೂ ಕೂಲಿ ಕಾರ್ಮಿಕರು ಕೆಲಸವಿಲ್ಲದೇ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಈ ಕೋವಿಡ್ನಿಂದ ಸಾಯುವವರ ಸಂಖ್ಯೆ ಹೆಚ್ಚಾದಂತೆ ನರೇಗಾ ಯೋಜನೆ ಇರದಿದ್ದರೆ ಹಸಿವಿನಿಂದ ಸಾಯುವವರ ಸಂಖ್ಯೆ ಸಹ ಹೆಚ್ಚಾಗುತ್ತಿತ್ತು. ಆ ಯೋಜನೆಯಿಂದಲೇ ಇವತ್ತು ಬಡ ಮತ್ತು ಕೂಲಿ ಕಾರ್ಮಿಕರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಎಂದು ಹಿಂದಿನ ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಬಿಚ್ಚಿಟ್ಟರು.
ಆಡಳಿತ ಸರ್ಕಾರ ವಿಫಲ: