ಬಳ್ಳಾರಿ:ನಗರದಲ್ಲಿ ಎಸ್ಯುಸಿಐ (ಕಮ್ಯುನಿಸ್ಟ್) ಪಕ್ಷ ಅಗತ್ಯ ವಸ್ತು ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿದೆ. ನಗರದ ನಾರಾಯಣ್ ರಾವ್ ಪಾರ್ಕ್ನಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ಜಿಲ್ಲಾಧಿಕಾರಿ ಕಚೇರಿವರೆಗೆ ಜಾಥಾ ನಡೆಸಲಾಯಿತು.
ಪೆಟ್ರೋಲ್, ಡಿಸೇಲ್, ಸಿಲಿಂಡರ್ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು. ಈ ವೇಳೆ ಮಾತನಾಡಿದ ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ರಾಜ್ಯ ಸಮಿತಿ ಸದಸ್ಯ ಕೆ.ಸೋಮಶೇಖರ್, ಕೇಂದ್ರ ಸರ್ಕಾರವು ಜನ ವಿರೋಧಿ ನೀತಿಗಳನ್ನು ತರುತ್ತಿದೆ ಕಾರ್ಪೊರೇಟ್ ಮನೆತನಗಳನ್ನು ಉದ್ದಾರ ಮಾಡುವುದಕ್ಕಾಗಿ ಜನಗಳ ಜೇಬಿಗೆ ಕತ್ತರಿ ಹಾಕುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಜನ ಬೀದಿಗಿಳಿದು ಹೋರಾಟ ಮಾಡಬೇಕು ಎಂದರು.