ಬಳ್ಳಾರಿ:ಕೇಂದ್ರ ಸರ್ಕಾರದ ರೈತ, ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಸೆ. 28ರಂದು ಕರೆ ನೀಡಿರುವ ಕರ್ನಾಟಕ ಬಂದ್ನ್ನು ಯಶಸ್ವಿಗೊಳಿಸಲಾಗುವುದು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ವಿ.ಎಸ್.ಶಿವಶಂಕರ ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಕರ್ನಾಟಕ ಬಂದ್ಗೆ ಬೆಂಬಲ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆಗಳು ರೈತ ವಿರೋಧಿಯಾಗಿವೆ. ಸರ್ಕಾರ ಕೂಡಲೇ ಇವುಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಬಂದ್ಗೆ ಸಿಐಟಿಯು, ದಲಿತ ಸಂಘಟನೆ, ದಲಿತ ಹಕ್ಕುಗಳ ಸಮಿತಿ, ಎಪಿಎಂಸಿ ಹಮಾಲಿ ಸಂಘ, ತರಕಾರಿ ಮಾರಾಟಗಾರರ ಸಂಘ, ಕಿರಾಣಿ ಮಾಲೀಕರ ಸಂಘ, ಬಳ್ಳಾರಿ ಜಿಲ್ಲಾ ವಕೀಲರ ಸಂಘ, ಬಳ್ಳಾರಿ ಲಾರಿ ಮಾಲೀಕರ ಸಂಘ, ಎಪಿಎಂಸಿ ಅಂಗಡಿ ಮಾಲೀಕರ ಸಂಘ, ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ ಎಂದರು.
ಕರ್ನಾಟಕ ರಕ್ಷಣ ವೇದಿಕೆ ಜಿಲ್ಲಾಧ್ಯಕ್ಷ ಚಾನಾಳ್ ಶೇಖರ್ ಮಾತನಾಡಿ, ಸೋಮವಾರ ಬೆಳಿಗ್ಗೆ 5 ಗಂಟೆಗೆಯಿಂದಲೇ ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗುವುದು ಎಂದರು.
ನಂತರ ಮಾತನಾಡಿದ ಸಿಐಟಿಯುನ ಹಿರಿಯ ಮುಖಂಡ ಸತ್ಯಬಾಬು, ಬೆಳಿಗ್ಗೆ 10 ಗಂಟೆಗೆ ಪಾದಯಾತ್ರೆ ಮೂಲಕ ಸಾರ್ವಜನಿಕರಿಗೆ ಬಂದ್ಗೆ ಸಹಕರಿಸಲು ಸಮಿತಿಯಿಂದ ಮನವಿ ಮಾಡುಕೊಳ್ಳುತ್ತೇವೆ ಎಂದರು.