ಹೊಸಪೇಟೆ:ತಾಲೂಕಿನ ಸೀತಾರಾಮ ತಾಂಡದಲ್ಲಿ 8 ಡೆಂಗ್ಯೂ ಪ್ರಕರಣಗಳು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ತಾತ್ಕಾಲಿಕ ಆರೋಗ್ಯ ಕೇಂದ್ರವನ್ನು ತೆರೆದಿದೆ.
ಹೊಸಪೇಟೆ: ಸೀತಾರಾಮ ತಾಂಡದಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರ
ಹೊಸಪೇಟೆ ತಾಲೂಕಿನ ಸೀತಾರಾಮ ತಾಂಡದಲ್ಲಿ ಕಳೆದ ಕೆಲ ದಿನಗಳಿಂದ ಡೆಂಗ್ಯೂ ಪ್ರಕರಣಗಳು ಕಂಡು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ತಾತ್ಕಾಲಿಕ ಆರೋಗ್ಯ ಕೇಂದ್ರವನ್ನು ತೆರೆದಿದೆ.
ಕಳೆದ ಎರಡು ವಾರಗಳಿಂದ ನಾನಾ ಕಾಯಿಲೆಗಳಿಂದ ಜನರು ಖಾಸಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದರು. ಬಳಿಕ ಡೆಂಗ್ಯೂ ಪ್ರಕರಣಗಳು ಕಂಡು ಬಂದಿದ್ದವು. ಸದ್ಯ ತಾತ್ಕಾಲಿಕ ಆಸ್ಪತ್ರೆಯನ್ನು ತೆರೆಯಲಾಗಿದ್ದು, ವೈದ್ಯರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ಮೊಕ್ಕಾಂ ಹೂಡಿ ಜನರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.
ಇನ್ನು ಗ್ರಾಮ ಪಂಚಾಯಿತಿಯಿಂದ ಫಾಗಿಂಗ್ ಮಾಡಲಾಗುತ್ತಿದೆ. ತಾಲೂಕು ವೈದ್ಯಾಧಿಕಾರಿ ಡಾ. ಡಿ.ಭಾಸ್ಕರ್ ಮಾತನಾಡಿ, ಸೀತಾರಾಮ ತಾಂಡದಲ್ಲಿ ಡೆಂಗ್ಯೂ ಪ್ರಕರಣಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರವನ್ನು ತೆರೆಯಲಾಗಿದೆ. ಈಗಾಗಲೇ 43 ಜನರಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ. ಅಲ್ಲದೆ ಟೈಫಾಯಿಡ್ ಜ್ವರ ಪ್ರಕರಣಗಳು ಪತ್ತೆಯಾಗಿವೆ ಎಂದು ಹೇಳಿದರು.