ಬಳ್ಳಾರಿ:ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ನಡುವೆ ಘರ್ಷಣೆ ನಡೆದ ಪರಿಣಾಮ ಸುಮಾರು 25ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಳ್ಳಾರಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಮಾರಾಮಾರಿ: ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ - ballary latest news
ನಗರದ ಮರಿ ಸ್ವಾಮಿ ಮಠದ ಹಿಂಭಾಗದಲ್ಲಿ ಎರಡು ಗುಂಪಿನ ನಡುವೆ ಘರ್ಷಣೆ ನಡೆದಿದ್ದು, ಪುಟ್ಟ ಮಕ್ಕಳು-ಮಹಿಳೆಯರು ಎಂಬುದನ್ನೂ ನೋಡದೆ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ಬಳ್ಳಾರಿಯಲ್ಲಿ ಮಾರಕಾಸ್ತ್ರಗಳಿಂದ ದಾಳಿ
ನಗರದ ಮರಿ ಸ್ವಾಮಿ ಮಠದ ಹಿಂಭಾಗದಲ್ಲಿ ನಿನ್ನೆ ತಡರಾತ್ರಿ ಘರ್ಷಣೆ ನಡೆದಿದ್ದು, ಪುಟ್ಟ ಮಕ್ಕಳು-ಮಹಿಳೆಯರು ಎಂಬುದನ್ನೂ ನೋಡದೆ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.
ನಗರದ ಬ್ರೂಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಘರ್ಷಣೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ಪ್ರಕರಣ ದಾಖಲಿಸುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.