ಬಳ್ಳಾರಿ: ಉದ್ಯೋಗ ಕೇಳಲು ಬಂದರೆ, ಬಿಜೆಪಿ ಸರ್ಕಾರ ಪಕೋಡ ಮಾಡಿ ಎಂದು ಹೇಳುವ ಮೂಲಕ ಯುವಶಕ್ತಿಗೆ ಅವಮಾನ ಮಾಡಿದೆ ಎಂದು ಹೂವಿನ ಹಡಗಲಿ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ್ ಟೀಕೆ ಮಾಡಿದರು.
ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆಯಲ್ಲಿ ಬಳ್ಳಾರಿ ಲೋಕಸಭಾ ಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಪರ ಪ್ರಚಾರ ಮಾಡಲು ಆಗಮಿಸಿದ ಹೂವಿನ ಹಡಗಲಿ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ್ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷದವರು ಲೂಟಿ ಹೊಡೆದ ಸಾವಿರಾರು ಕೋಟಿ ಕಪ್ಪು ಹಣವನ್ನು ಸ್ವಿಸ್ಬ್ಯಾಂಕ್ನಲ್ಲಿ ಇಟ್ಟಿದ್ದಾರೆ. ಅದನ್ನು ತಂದು ಎಲ್ಲರ ಖಾತೆಗೆ ತಲಾ 15 ಲಕ್ಷ ರೂ. ಜಮೆ ಮಾಡುವುದಾಗಿ ಮೋದಿ ಭರವಸೆ ನೀಡಿದ್ದರು. ಆದ್ರೀಗ ಆ ಭರವಸೆ ಎಲ್ಲಿ ಹೋಯ್ತು ಎಂದು ಪ್ರಶ್ನಿಸಿದ್ರು.