ಹೊಸಪೇಟೆ:ಲಾರಿ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.
ಲಾರಿ-ಕಾರು ನಡುವೆ ಮುಖಾಮುಖಿ ಡಿಕ್ಕಿ: ಸ್ಥಳದಲ್ಲಿಯೇ ಇಬ್ಬರ ಸಾವು - two deaths on the spot
ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊಸಪೇಟೆಯಲ್ಲಿ ನಡೆದಿದೆ.
ಲಾರಿ -ಕಾರು ನಡುವೆ ಮುಖಾಮುಖಿ ಡಿಕ್ಕಿ
ನಗರ ಸಮೀಪದ ಟಿ.ಬಿ. ಡ್ಯಾಂ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ (63)ರಲ್ಲಿ ಇಂದು ಸಂಜೆ ಈ ದುರ್ಘಟನೆ ನಡೆದಿದೆ. ಈ ವ್ಯಕ್ತಿಗಳು ಟಿ.ಬಿ. ಡ್ಯಾಂ ನಿವಾಸಿಗಳಾಗಿದ್ದು, ಮಾಲತೇಶ (27), ವಿನೋದ್ (28) ಎಂದು ಗುರುತಿಸಲಾಗಿದೆ.
ವಿವಾಹ ಆಮಂತ್ರಣ ಪತ್ರಿಕೆ ವಿತರಣೆಗಾಗಿ ಕಾರಿನಲ್ಲಿ ತೆರಳುವಾಗ ಈ ಆವಘಡ ನಡೆದಿದೆ. ಈ ಕುರಿತು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.