ಬಳ್ಳಾರಿ:ಹುಡುಗಿಯ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ಉಂಟಾಗಿರುವ ಘಟನೆ ನಗರದ ಕೌಲ್ ಬಜಾರ್ ಪ್ರದೇಶದ ಮಹಮದೀಯ ಕಾಲೇಜ್ ಮುಂದೆ ನಡೆದಿದೆ.
ಹುಡುಗಿಯ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ? ಎರಡೂ ಕಡೆಯವರು ಹೊಡೆದಾಡಿಕೊಂಡಿದ್ದು, ಆರೇಳು ಜನರ ಮುಖ, ಕೈ-ಕಾಲು, ತಲೆಗೆ ಪೆಟ್ಟಾಗಿದೆ ಎನ್ನಲಾಗ್ತಿದೆ. ಹುಡುಗಿಯ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ ಎಂದು ಸ್ಥಳೀಯರಿಂದ ಮಾಹಿತಿ ಲಭ್ಯವಾಗಿದೆ.
ಇದನ್ನು ಓದಿ:ಕೋಲಾರದಲ್ಲಿ ಆಕ್ಷೇಪಾರ್ಹ ಪೋಸ್ಟರ್: ಸಾಮಾಜಿಕ ಶಾಂತಿ ಕದಡುವ ಕೆಲಸಕ್ಕೆ ಮುಂದಾದ ಕಿಡಿಗೇಡಿಗಳು
ಈ ಗಲಾಟೆಯಲ್ಲಿ ಬಳ್ಳಾರಿ ನಗರದ ಗ್ರಾಮ ಲೆಕ್ಕಾಧಿಕಾರಿ ಇದಾಯತ್ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಕೌಲ ಬಜಾರ್ ಠಾಣೆಯ ಸಿಪಿಐ ಸುಭಾಷ್ ಚಂದ್ರ ಭೇಟಿ ನೀಡಿ, ಪರಿಶೀಲಿಸಿದ್ದಾರೆ.