ಕರ್ನಾಟಕ

karnataka

ETV Bharat / state

ಹೊಸಪೇಟೆ : ಕತ್ತು ಕೊಯ್ದು ಮಹಿಳೆಯ ಬರ್ಬರ ಹತ್ಯೆ - ಹೊಸಪೇಟೆ ತಾಲೂಕಿನಲ್ಲಿ ಮಹಿಳೆ ಬರ್ಬರ ಹತ್ಯೆ

ಮಹಿಳೆ ಹೊಲಕ್ಕೆ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಶನಿವಾರ ಮಧ್ಯಾಹ್ನ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ತಡ ರಾತ್ರಿ ಶವ ಪತ್ತೆಯಾಗಿದ್ದು, ಭಾನುವಾರ ಬೆಳಗ್ಗೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

The murder of a woman in Hosapete Taluk
ಹೊಲಕ್ಕೆ ಕೆಲಸ ಹೋಗುವ ಸಂದರ್ಭದಲ್ಲಿ ಮಹಿಳೆ ಬರ್ಬರ ಹತ್ಯೆ

By

Published : Jan 10, 2021, 11:31 AM IST

Updated : Jan 10, 2021, 12:33 PM IST

ಹೊಸಪೇಟೆ: ಹೊಲಕ್ಕೆ ಕೆಲಸ ಹೋಗುತ್ತಿದ್ದ ಮಹಿಳೆಯೊಬ್ಬಳನ್ನು ಅಡ್ಡಗಟ್ಟಿ, ಕುಡಗೋಲಿನಿಂದ ಕುತ್ತಿಗೆ ಕೊಯ್ದು ಹಾಗೂ ತಲೆಗೆ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಕತ್ತು ಕೊಯ್ದು ಮಹಿಳೆಯ ಬರ್ಬರ ಹತ್ಯೆ

ಮೃತಳನ್ನು ನಾಗಮ್ಮ (45) ಎಂದು ಗುರುತಿಸಲಾಗಿದೆ. ಮಹಿಳೆ ಹೊಲಕ್ಕೆ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಶನಿವಾರ ಮಧ್ಯಾಹ್ನ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಶವ ಪತ್ತೆಯಾಗಿದ್ದು, ಭಾನುವಾರ ಬೆಳಗ್ಗೆ ಸ್ಥಳಕ್ಕೆ ಡಿವೈಎಸ್ಪಿ ರಘುಕುಮಾರ ಹಾಗೂ ಗ್ರಾಮೀಣ ಠಾಣೆಯ ಪಿಐ ಶ್ರೀನಿವಾಸ ಮೇಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ : ರೈಲಿನಡಿ ಸಿಲುಕುತ್ತಿದ್ದ ಮಹಿಳೆಯ ಜೀವ ಉಳಿಸಿದ ಆರ್‌ಪಿಎಫ್ ಸಿಬ್ಬಂದಿ

Last Updated : Jan 10, 2021, 12:33 PM IST

ABOUT THE AUTHOR

...view details