ಬಳ್ಳಾರಿ:ಹೊಟ್ಟೆನೋವು ತಾಳಲಾರದೆ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೂಡ್ಲಿಗಿ ತಾಲೂಕಿನ ಕಾನಾಹೊಸಹಳ್ಳಿ ಸಮೀಪದ ಹಾರಕಬಾವಿ ಗ್ರಾಮದಲ್ಲಿ ನಡೆದಿದೆ.
ಹೊಟ್ಟೆ ನೋವು ತಾಳಲಾರದೆ ನೇಣಿಗೆ ಶರಣಾದ ಯುವತಿ - ಬಳ್ಳಾರಿ'
ಬಳ್ಳಾರಿಯಲ್ಲಿ ಹೊಟ್ಟೆ ನೋವು ತಾಳಲಾರದೆ ಕುಸುಮಾ ಎಂಬ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಬಗ್ಗೆ ಕಾನಹೊಸಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದೆ.
ನೇಣಿಗೆ ಶರಣು
ಕುಸುಮಾ (16) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. 'ಕಳೆದ ಒಂದು ವರ್ಷದಿಂದ ನಿರಂತರವಾಗಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಎಷ್ಟೇ ಚಿಕಿತ್ಸೆ ಕೊಡಿಸಿದ್ದರೂ ನೋವು ನಿವಾರಣೆ ಆಗಿರಲಿಲ್ಲ' ಎಂದು ಮೃತಳ ತಾಯಿ ದೂರಿನಲ್ಲಿ ದಾಖಲಿಸಿದ್ದಾರೆ.
ಕಳೆದ ಎರಡು ದಿನಗಳಿಂದ ತೀವ್ರವಾಗಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಆ ನೋವು ಸಹಿಸಿಕೊಳ್ಳಲು ಆಗದೆ ನೇಣು ಹಾಕಿಕೊಂಡಿದ್ದಾರೆ ಎಂದು ತಾಯಿ ಮಹಾಲಕ್ಷ್ಮಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕಾನಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.