ಬಳ್ಳಾರಿ: ಜಿಲ್ಲೆಯ ಸಿರಗುಪ್ಪ ಪಟ್ಟಣದ ಅಬಕಾರಿ ಕಚೇರಿಗೆ ಕನ್ನ ಹಾಕಿದ ಕಳ್ಳರು ಸಾವಿರಾರು ರೂ. ಮೌಲ್ಯದ ಮದ್ಯದ ಬಾಟಲ್ಗಳಿದ್ದ ಬಾಕ್ಸ್ಗಳನ್ನ ದೋಚಿ ಪರಾರಿಯಾಗಿದ್ದಾರೆ.
ಲಾಕ್ಡೌನ್ ಹಿನ್ನೆಲೆ ಜಿಲ್ಲಾದ್ಯಂತ ಸಂಪೂರ್ಣ ಮದ್ಯ ಮಾರಾಟ ಬಂದ್ ಆಗಿದೆ. ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಿ ದಾಳಿ ನಡೆಸಿದ್ದ ಅಬಕಾರಿ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದ ಮದ್ಯದ ಬಾಟಲ್ನ್ನು ಕಚೇರಿಯಲ್ಲಿ ಸಂಗ್ರಹಿಸಿಡಲಾಗಿತ್ತು.