ಬಳ್ಳಾರಿ:ಗಣಿನಾಡಿನಲ್ಲಿ ಖತರ್ನಾಕ್ ಯುವತಿಯರ ಗ್ಯಾಂಗ್ವೊಂದು ತಲೆಯೆತ್ತಿದೆ. ಗ್ರಾಹಕರ ಸೋಗಿನಲ್ಲಿ ಬಂದು ಕ್ಷಣಾರ್ಧದಲ್ಲೇ ಹಣ ಕದ್ದು ಎಸ್ಕೇಪ್ ಆಗ್ತಾರೆ.
ಗ್ರಾಹಕರ ಸೋಗಿನಲ್ಲಿ ಬಂದು ಕಳ್ಳತನ.. ಖದೀಮರ ಕೈ ಚಳಕ ಸಿಸಿಟಿವಿಯಲ್ಲಿ ಸೆರೆ - ಬಳ್ಳಾರಿಯಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ಕಳ್ಳತನ
ಕಳ್ಳತನಕ್ಕೆ ಸಂಬಂಧಿಸಿದಂತೆ ಈಗಾಗಲೇ ಎರಡು ಪ್ರಕರಣಗಳು ದಾಖಲಾಗಿವೆ. ಈ ಗ್ಯಾಂಗ್ನ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆ ಹಚ್ಚಲಾಗುವುದು..
ಗ್ರಾಹಕರ ಸೋಗಿನಲ್ಲಿ ಬಂದು ಕಳ್ಳತನ
ದಸರಾ ಹಿನ್ನೆಲೆ ಮಾರ್ಕೇಟ್, ಅಂಗಡಿಗಳಲ್ಲಿ ಜನರು ವ್ಯಾಪಾರದಲ್ಲಿ ತೊಡಗಿದ್ದರು. ಗ್ರಾಹಕರು ಜೇಬಿನಿಂದ ಹಣ ತೆಗೆಯುವುದನ್ನೇ ಕಾಯುತ್ತಿದ್ದ ಗ್ಯಾಂಗ್ ಪರ್ಸ್ ಸಮೇತ ಹಣ ಎಗರಿಸಿ ಪರಾರಿಯಾಗಿದ್ದಾರೆ. ಯುವತಿಯರ ಈ ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್ಪಿ ಸೈದುಲು ಅದಾಲತ್, ಕಳ್ಳತನಕ್ಕೆ ಸಂಬಂಧಿಸಿದಂತೆ ಈಗಾಗಲೇ ಎರಡು ಪ್ರಕರಣಗಳು ದಾಖಲಾಗಿವೆ. ಈ ಗ್ಯಾಂಗ್ನ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆ ಹಚ್ಚಲಾಗುವುದು ಎಂದರು.