ಹೊಸಪೇಟೆ: ಮೈಸೂರು ಪಾಲಿಕೆ ಮೇಯರ್ ಚುನಾವಣೆಯು ಸ್ಥಳೀಯ ನಾಯಕರಿಗೆ ಬಿಟ್ಟ ವಿಚಾರ, ಇದರಲ್ಲಿ ಯಾವ ವಿರೋಧವಿಲ್ಲ. ನಾವೇನಾದರೂ ಬಿಜೆಪಿ ಜತೆಗೆ ಮೇಯರ್ ಸ್ಥಾನಕ್ಕೆ ಹಂಚಿಕೆ ಮಾಡಿಕೊಂಡಿದ್ದರೆ ಅದು ಪಕ್ಷದ ತತ್ವ ಸಿದ್ಧಾಂತಕ್ಕೆ ವಿರುದ್ಧವಾಗುತ್ತಿತ್ತು ಎಂದು ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ. ಯಾವ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಪಕ್ಷ ಗೆಲ್ಲುವ ಶಕ್ತಿ ಹೊಂದಿದೆ. ಬಿಜೆಪಿಗೆ ಜನರ ವಿರೋಧವಿದೆ ಎಂದರು.